Advertisement
ಮಂಗಳೂರು ನಗರದಲ್ಲಿ ಬೆಳಗ್ಗೆ ಮಳೆಯಾಗಿತ್ತು. ಬಳಿಕ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗಿದ್ದು, ಮೋಡದಿಂದ ಕೂಡಿದ ವಾತಾವರಣ ಇತ್ತು. ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಬುಧವಾರ ಕೆಲವೆಡೆ ಉತ್ತಮ ಮಳೆಯಾಗಿದ್ದು, ಕಾಪು, ಹೆಬ್ರಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಶಂಕರನಾರಾಯಣ, ಕಾಪು, ಬೆಳ್ಮಣ್, ಅಜೆಕಾರು, ಕುಂದಾಪುರ, ಪರ್ಕಳ, ಸಿದ್ದಾಪುರ, ಪಡುಬಿದ್ರಿ, ಬೈಂದೂರು, ಮಲ್ಪೆ, ಮಣಿಪಾಲ ಭಾಗದಲ್ಲಿ ಬಿಟ್ಟುಬಿಟ್ಟು ಮಳೆ ಸುರಿದಿದೆ. ಮಂಗಳವಾರ ತಡರಾತ್ರಿಯಿಂದ ಬುಧವಾರ ಮುಂಜಾನೆ ವರೆಗೆ ಹಲವೆಡೆ ಧಾರಾಕಾರ ಮಳೆ ಸುರಿದಿದೆ.
Related Articles
ರಾಜ್ಯ ಕರಾವಳಿ ಭಾಗದಲ್ಲಿ ಜೂ. 29ರ ಬೆಳಗ್ಗೆ 8.30ರ ವರೆಗೆ “ಆರೆಂಜ್ ಅಲರ್ಟ್” ಅನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ವೇಳೆ 115.6 ಮಿ.ಮೀ.ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಜೂ. 29 ಬೆಳಗ್ಗೆ 8.30ರಿಂದ ಜು. 3ರ ವರೆಗೆ ಎಲ್ಲೋ ಅಲರ್ಟ್ ಘೊಷಿಸಲಾಗಿದೆ. ಈ ವೇಳೆ 64.5 ಮಿ.ಮೀ.ನಿಂದ 115.5 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ.
Advertisement