Advertisement

ಘಟಪ್ರಭಾ ಬಲದಂಡೆ ಕಾಲುವೆಗೆ 10 ದಿನ ನೀರು

04:32 PM Apr 17, 2020 | Suhan S |

ಗೋಕಾಕ: ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕಾಗಿ ಹಿಡಕಲ್‌ ಜಲಾಶಯದ ಮೂಲಕ ಘಟಪ್ರಭಾ ಬಲದಂಡೆ ಕಾಲುವೆಗೆ ಗುರುವಾರ ಸಂಜೆಯಿಂದ ಮುಂದಿನ 10 ದಿನಗಳ ವರೆಗೆ ನೀರನ್ನು ಹರಿಸಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಂದು ಸಂಜೆ ಆರು ಗಂಟೆಯಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಎರಡು ಟಿಎಂಸಿ ಮತ್ತು ಸಿಬಿಸಿ ಕಾಲುವೆಗೆ 5500 ಕ್ಯೂಸೆಕ್‌ ನೀರನ್ನು ಬಿಡಲಾಗುತ್ತದೆ ಎಂದು ಹೇಳಿದ್ದಾರೆ. ಬೇಸಿಗೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ನೀರನ್ನು ಹರಿಸಲಾಗುತ್ತಿದೆ. ಈ ನೀರನ್ನು ಘಟಪ್ರಭಾ ಬಲದಂಡೆ ಕಾಲುವೆಯ ವ್ಯಾಪ್ತಿಯ ರೈತರು ಸದುಪಯೋಗ ಪಡಿಸಿಕೊಳ್ಳಬೇಕೆಂದು ವಿನಂತಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next