Advertisement

ಬೆಳೆ ಸಮೀಕ್ಷೆ ಪೂರ್ಣಗೊಳಿಸಲು 10 ದಿನ ಗಡುವು: ಜಿಲ್ಲಾಧಿಕಾರಿ ಡಾ.ರವಿ

03:57 PM Sep 13, 2020 | Suhan S |

ಚಾಮರಾಜನಗರ: ಬೆಳೆ ನಷ್ಟ, ಬೆಳೆ ವಿಮೆ ಸೇರಿದಂತೆ ವಿವಿಧ ಪರಿಹಾರ ಸೌಲಭ್ಯಕ್ಕಾಗಿ ರೈತರೇ ಫೋಟೊ ತೆಗೆದು ಅಪ್‌ ಲೋಡ್‌ ಮಾಡಲು ಅವಕಾಶ ನೀಡಿರುವ ಸಮೀಕ್ಷೆ ಬಗ್ಗೆ ರೈತರಿಗೆ ಅಧಿಕಾರಿಗಳು ಮಾರ್ಗದರ್ಶನ ನೀಡಿ ಇನ್ನು 10 ದಿನಗಳೊಳಗೆ ಸಂಪೂರ್ಣ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರನಡೆದ 2020-21ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರೈತರು ತಾವು ಬೆಳೆದ ಬೆಳೆಯನ್ನು ತಾವೇ ಮೊಬೈಲ್‌ ಆ್ಯಪ್‌ ಮೂಲಕ ಅಪ್‌ ಲೋಡ್‌ ಮಾಡುವ ಅವಕಾಶ ನೀಡಲಾಗಿದೆ. ರೈತರಿಗೆ ಇಲಾಖೆ ಅಧಿಕಾರಿಗಳು ಮಾರ್ಗದರ್ಶನ ಮಾಡಿ ಸಮೀಕ್ಷಾ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಸೂಚಿಸಲಾಗಿರುವ ಗಡುವಿಗೆ ಕಾಯದೇ ಮುಂಚಿತವಾಗಿಯೇ ಸಮೀಕ್ಷೆ ಕಾರ್ಯದಲ್ಲಿ ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು.

ಸಮೀಕ್ಷಾ ಕಾರ್ಯದ ಉಸ್ತುವಾರಿ ವಹಿಸಿ ರೈತರಿಗೆನೆರವಾಗಲು ರೇಷ್ಮೆ, ಪಶುಸಂಗೋಪನೆ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳನ್ನೇ ನೋಡಲ್‌ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಈ ಅಧಿಕಾರಿಗಳು ವ್ಯಾಪಕವಾಗಿ ಕ್ಷೇತ್ರ ಪ್ರವಾಸ ಕೈಗೊಂಡು ಬೆಳೆ ಸಮೀಕ್ಷೆ ಪರಿಶೀಲಿಸಬೇಕು. ಮಾಹಿತಿ ಅಪ್‌ ಲೋಡ್‌ ಮಾಡಲು ನೆರವಾಗಬೇಕು. ವಿಳಂಬ, ನಿರ್ಲಕ್ಷ್ಯ ಧೋರಣೆ ವಹಿಸುವುದನ್ನು ಸಹಿಸಲಾಗುವು ದಿಲ್ಲ, ಬೆಳೆ ಸಮೀಕ್ಷೆ ಜಿಲ್ಲೆಯಲ್ಲಿ ಕುಂಠಿತವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹಿರಿಯ ಅಧಿಕಾರಿಗಳು ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ರೈತರ ಜಮೀನಿನಲ್ಲಿ ಬೆಳೆ ಸರ್ವೆ ಮಾಡಲುರೈತರೊಂದಿಗೆ ಮಾರ್ಗದರ್ಶನ ಮಾಡಲು ಖಾಸಗಿ (ಪಿ.ಆರ್‌) ನಿವಾಸಿಗಳಿಗೂ ಅವಕಾಶ ಕಲ್ಪಿಸಲಾಗಿದೆ. ರೈತರ ಸಮ್ಮತಿ, ಒಪ್ಪಿಗೆ ಪಡೆದು ನಿಯಮಾನುಸಾರಕ್ರಮಬದ್ಧ ಮಾಹಿತಿಯೊಂದಿಗೆ ಸಮೀಕ್ಷೆಗೆ ಸಹಕರಿಸಲು ಅಧಿಕಾರಿಗಳು ಮುಂದಾಗಬೇಕೆಂದು ತಿಳಿಸಿದರು.

ಬೆಳೆ ಸಮೀಕ್ಷೆ ಕಾರ್ಯಕ್ಕೆ ನಿಗದಿತ ಗುರಿ ನೀಡಿ ಅಂತಿಮ ದಿನಾಂಕ ನಿಗದಿಪಡಿಸಲಾಗಿದೆ. ಪೂರ್ಣ ಪ್ರಮಾಣದಲ್ಲಿ ಬೆಳೆ ಸರ್ವೆ ಕಾರ್ಯ ಆಗಲೇಬೇಕು, ಗ್ರಾಮಲೆಕ್ಕಿಗರು, ತಹಶೀಲ್ದಾರರು, ಸೇರಿದಂತೆ ಎಲ್ಲಾ ಅಧಿಕಾರಿಗಳು ಕ್ರಿಯಾ ಯೋಜನೆ ಅನುಸಾರ ಬೆಳೆ ಸಮೀಕ್ಷೆ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ರೈತರನ್ನು ಖುದ್ದು ಭೇಟಿ ಮಾಡಿ ಬೆಳೆ ಸಮೀಕ್ಷೆಗೆ ನೆರವಾಗಬೇಕು. ಸೂಚಿಸಲಾಗಿರುವ ಇಲಾಖೆ ಅಧಿಕಾರಿಗಳು ಬೆಳೆ ಸಮೀಕ್ಷೆ ಕಾರ್ಯವನ್ನು ಆದತ್ಯೆಮೇರೆಗೆ ಪರಿಗಣಿಸಿ ಪ್ರಗತಿ ಸಾಧಿಸಬೇಕು. ಇಲ್ಲವಾದಲ್ಲಿ ಗಂಭೀರ ಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

Advertisement

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್‌, ಜಂಟಿ ಕೃಷಿ ನಿರ್ದೇಶಕಿ ಚಂದ್ರಕಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next