Advertisement

ಸಿಲಿಂಡರ್ ಸ್ಫೋಟಕ್ಕೆ 2 ಅಂತಸ್ತಿನ ಮನೆ ಕುಸಿದು ಬಿದ್ದು ಹತ್ತು ಮಂದಿ ಸಾವು, ಹಲವರಿಗೆ ಗಾಯ

10:26 AM Oct 15, 2019 | Team Udayavani |

ಲಕ್ನೋ: ಸಿಲಿಂಡರ್ ಸ್ಫೋಟಗೊಂಡು ಮನೆ ಕುಸಿದು ಬಿದ್ದ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶ ಮೌ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

Advertisement

ಮೌ ಜಿಲ್ಲೆಯ ಮೊಹಮ್ಮದಾಬಾದ್ ಪ್ರದೇಶದಲ್ಲಿನ ಎರಡು ಅಂತಸ್ತಿನ ಮನೆಯೊಳಗೆ ಸಿಲಿಂಡರ್ ಸ್ಫೋಟಗೊಂಡ ರಭಸಕ್ಕೆ ಮನೆ ಕುಸಿದು ಬಿದ್ದಿದ್ದು, ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಸಾಧ್ಯತೆ ಇದ್ದಿರುವುದಾಗಿ ಸ್ಥಳೀಯ ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ದೊಡ್ಡ ಶಬ್ದ ಕೇಳಿ ಗಾಬರಿಗೊಳಗಾಗಿರುವುದಾಗಿ ಸ್ಥಳೀಯ ಜನರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅವಶೇಷಗಳಡಿ ಸಿಲುಕಿದ್ದಾರೆಯೇ ಎಂದು ಪರಿಶೀಲಿಸಲಾಗುತ್ತಿದೆ ಎಂದು ವರದಿ ವಿವರಿಸಿದೆ. ಘಟನಾ ಸ್ಥಳದಲ್ಲಿ ಆ್ಯಂಬುಲೆನ್ಸ್ ಹಾಗೂ ಭಾರೀ ಜನಸ್ತೋಮ ನೆರೆದಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next