Advertisement
ವಿಕಾಸಸೌಧದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಐಬಿಎಂ ಸಮೂಹದ ಕ್ಲೈಯಂಟ್ ಇನ್ನೊವೇಶನ್ ಸೆಂಟರ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, 2026ರ ವೇಳೆಗೆ ಮೈಸೂರು, ಹುಬ್ಬಳ್ಳಿ ಮತ್ತು ಮಂಗಳೂರು ಕ್ಲಸ್ಟರ್‌ಗಳಲ್ಲಿ ಐದು ಸಾವಿರ ಐಟಿ ಕಂಪೆನಿಗಳು ಮತ್ತು ನವೋದ್ಯಮಗಳು ನೆಲೆಯೂರುವಂತೆ ಮಾಡಲಾಗುವುದು ಎಂದು ಹೇಳಿದರು.
Related Articles
Advertisement
ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು ಮಾತನಾಡಿ, ಡಿಜಿಟಲ್ ಎಕಾನಮಿ ಮಿಷನ್ ಯೋಜನೆಯಡಿ 2025ರ ಹೊತ್ತಿಗೆ ರಾಜ್ಯಕ್ಕೆ ಕನಿಷ್ಠ ಪಕ್ಷ 100 ಕಂಪೆನಿಗಳ ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.
ಐಬಿಎಂ ವ್ಯವಸ್ಥಾಪಕ ಪಾಲುದಾರ ಅಮಿತ್ ಶರ್ಮಾ, ಐಟಿ-ಬಿಟಿ ಮತ್ತು ವಿದ್ಯುನ್ಮಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಉನ್ನತ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಐಟಿ ನಿರ್ದೇಶಕಿ ಮೀನಾ ನಾಗರಾಜ್, ಲಹರಿ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಸಂಜೀವ್ ಗುಪ್ತ ಮುಂತಾದವರು ಉಪಸ್ಥಿತರಿದ್ದರು.