Advertisement

2025ರ ವೇಳೆಗೆ 10 ಲಕ್ಷ ಉದ್ಯೋಗ ಸೃಷ್ಟಿ ಗುರಿ: ಡಾ|ಸಿ.ಎನ್‌.ಅಶ್ವತ್ಥನಾರಾಯಣ

08:36 PM Nov 08, 2021 | Team Udayavani |

ಬೆಂಗಳೂರು : ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ ನೀತಿಯಡಿಯಲ್ಲಿ 2025ರ ವೇಳೆಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ 10 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಐಟಿ-ಬಿಟಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ್‌ ತಿಳಿಸಿದ್ದಾರೆ.

Advertisement

ವಿಕಾಸಸೌಧದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಐಬಿಎಂ ಸಮೂಹದ ಕ್ಲೈಯಂಟ್‌ ಇನ್ನೊವೇಶನ್‌ ಸೆಂಟರ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, 2026ರ ವೇಳೆಗೆ ಮೈಸೂರು, ಹುಬ್ಬಳ್ಳಿ ಮತ್ತು ಮಂಗಳೂರು ಕ್ಲಸ್ಟರ್‌ಗಳಲ್ಲಿ ಐದು ಸಾವಿರ ಐಟಿ ಕಂಪೆನಿಗಳು ಮತ್ತು ನವೋದ್ಯಮಗಳು ನೆಲೆಯೂರುವಂತೆ ಮಾಡಲಾಗುವುದು ಎಂದು ಹೇಳಿದರು.

ಸಾಫ್ಟ್ವೇರ್‌ ಎಂಜಿನಿಯರಿಂಗ್‌, ವಿನ್ಯಾಸ ಮತ್ತು ಅನಲಿಟಿಕ್ಸ್‌ಗಳಲ್ಲಿ ಪರಿಣತಿ ಹೊಂದಿರುವ ಸಿಐಸಿ ಕೇಂದ್ರವು ಮೈಸೂರಿನಿಂದ ತನ್ನ ಚಟುವಟಿಕೆಗಳನ್ನು ನಡೆಸಲಿದ್ದು, ಎರಡು ತಿಂಗಳಲ್ಲಿ ಐಬಿಎಂ ಸಮೂಹವು ಮೈಸೂರಿನಲ್ಲೂ ತನ್ನ ಕಚೇರಿಯನ್ನು ಆರಂಭಿಸಲಿದೆ. ಈ ಕೇಂದ್ರವು ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕ್ಷಿಪ್ರ ಮತ್ತು ಹೈಟೆಕ್‌ ಆರ್ಥಿಕತೆಯ ಬೆಳವಣಿಗೆಗೆ ನೆರವಾಗಲಿದೆ ಎಂದರು.

ಮೈಸೂರಿನಲ್ಲಿ ಐಬಿಎಂ ತನ್ನ ಸಿಐಸಿ ಕೇಂದ್ರವನ್ನು ತೆರೆದಿರುವುದರಿಂದ ರಾಜ್ಯವು ಜಾಗತಿಕ ಮಟ್ಟದ ಡಿಜಿಟಲ್‌ ಸೇವೆಗಳು ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿಯಲಿದೆ ಎಂದರು.

ಇದನ್ನೂ ಓದಿ : ವಿಜಯಪುರ : ಜಗತ್ತಿನ ಅದ್ಭುತ ಗೋಲಗುಮ್ಮಟ ಕಂಡು ನಿಬ್ಬೆರಗಾದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

Advertisement

ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು ಮಾತನಾಡಿ, ಡಿಜಿಟಲ್‌ ಎಕಾನಮಿ ಮಿಷನ್‌ ಯೋಜನೆಯಡಿ 2025ರ ಹೊತ್ತಿಗೆ ರಾಜ್ಯಕ್ಕೆ ಕನಿಷ್ಠ ಪಕ್ಷ 100 ಕಂಪೆನಿಗಳ ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.

ಐಬಿಎಂ ವ್ಯವಸ್ಥಾಪಕ ಪಾಲುದಾರ ಅಮಿತ್‌ ಶರ್ಮಾ, ಐಟಿ-ಬಿಟಿ ಮತ್ತು ವಿದ್ಯುನ್ಮಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಉನ್ನತ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್‌, ಐಟಿ ನಿರ್ದೇಶಕಿ ಮೀನಾ ನಾಗರಾಜ್‌, ಲಹರಿ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಸಂಜೀವ್‌ ಗುಪ್ತ ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next