Advertisement

ಮನೆ ಕಟ್ಟಿಕೊಳ್ಳಲು 10 ಲಕ್ಷ, 15 ಗುಂಟೆ ಜಾಗ ನೀಡಿ

11:19 PM Sep 07, 2019 | Team Udayavani |

ಬೆಂಗಳೂರು: ” ಪ್ರವಾಹ ಪೀಡಿತರಿಗೆ ಮನೆ ಕಟ್ಟಿಕೊಳ್ಳಲು ರಾಜ್ಯ ಸರ್ಕಾರ 10 ಲಕ್ಷ ಹಾಗೂ 15 ಗುಂಟೆ ಜಾಗ ನೀಡಬೇಕು’ ಎಂದು ಆಗ್ರಹಿಸಿ ರುವ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, “ಪ್ರಧಾನಿ ಮೋದಿಯವರು ರಾಜ್ಯಕ್ಕೆ ಆಗಮಿಸಿ ದರೂ, ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ಮಾತನಾಡದೆ ರಾಜ್ಯದ ಜನತೆಗೆ ಅವಮಾನ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಪ್ರಧಾನಿ ಬಂದು ಪ್ರವಾಹ ಪೀಡಿತ ಜನರಿಗೆ ಪರಿಹಾರ ಘೋಷಣೆ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ, ಜನರ ನಿರೀಕ್ಷೆ ಹುಸಿಯಾಗಿದೆ ಎಂದರು.

ರಾಜ್ಯ ಬಿಜೆಪಿಯವರನ್ನು ಕೇಂದ್ರದಿಂದ ಪರಿಹಾರ ಪಡೆಯುವ ಬಗ್ಗೆ ಕೇಳಿದಾಗ ಪ್ರಧಾನಿ ರಾಜ್ಯಕ್ಕೆ ಬಂದಾಗ ಮಾತನಾಡುತ್ತಾರೆ ಎಂದು ಹೇಳಿದ್ದರು. ರಾಜ್ಯದಲ್ಲಿ ಅವರದೇ ಸರ್ಕಾರ ಇದ್ದರೂ, ಮೋದಿಯವರು ರಾಜ್ಯದ ಮುಖ್ಯ ಮಂತ್ರಿ ಹಾಗೂ ಸಂಬಂಧಪಟ್ಟ ಮಂತ್ರಿಗಳನ್ನು ಕರೆದು ಮಾತನಾಡಿಸುವ ಗೋಜಿಗೆ ಹೋಗಿಲ್ಲ. ಚಂದ್ರಯಾನ-2 ಕಾರ್ಯಕ್ರಮಕ್ಕೆ ಬಂದು ಇಸ್ರೋದಲ್ಲಿ ಅರ್ಧಗಂಟೆ ಭಾಷಣ ಮಾಡಿದ್ದಾರೆ.

ಆದರೆ, ಮೋದಿಯವರು ಸೌಜನ್ಯಕ್ಕೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾತನಾಡಿಲ್ಲ ಎಂದು ದೂರಿದರು. ರಾಜ್ಯ ಸರ್ಕಾರ ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ, ಕೇಂದ್ರಕ್ಕೆ ನಿಯೋಗ ಕರೆದು ಕೊಂಡು ಹೋಗಬೇಕು. ಪ್ರವಾಹದ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಬೇಡಿಕೆಗಳು
-ಕಾಫಿ, ಅಡಿಕೆ, ತೆಂಗು ಬೆಳೆಗಳಿಗೆ ಪ್ರತಿ ಎಕರೆಗೆ 10 ಲಕ್ಷ ರೂ.ಪರಿಹಾರ ನೀಡಬೇಕು.
-ಕರಾವಳಿ ಭಾಗಕ್ಕೆ ವಿಶೇಷ ಪ್ಯಾಕೇಜ್ ನೀಡಬೇಕು.
-ಹಸು, ಎತ್ತುಗಳಿಗೆ 50 ಸಾವಿರ, ಕುರಿಗೆ 10 ಸಾವಿರ, ಕೋಳಿಗೆ 500 ರೂ.ಪರಿಹಾರ ನೀಡಬೇಕು.
-ಕಬ್ಬಿಗೆ ಪ್ರತಿ ಎಕರೆಗೆ 50 ಸಾವಿರ ನೀಡಬೇಕು. ನರೇಗಾ ಮೂಲಕ ಉದ್ಯೋಗ ಕೊಡಿಸಬೇಕು.
-ಆಲಮಟ್ಟಿ ಮುಳುಗಡೆ ಪ್ರದೇಶದ ರೈತರಿಗೆ ಈಗಿನ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡಬೇಕು.
-ಬರ, ಪ್ರವಾಹ, ಪರಿಸರ ನಿರ್ವಹಣೆಗೆ ರಾಷ್ಟ್ರಮಟ್ಟದಲ್ಲಿ ತಜ್ಞರ ಸಮಿತಿ ರಚನೆ ಮಾಡಬೇಕು.

Advertisement

ಮಾಧ್ಯಮಗಳ ಮೇಲೆ ನಿಯಂತ್ರ ಣ ಹೇರುವ ಪ್ರಯತ್ನ ನಡೆಸು ವುದು ಸರಿಯಲ್ಲ. ಕೆಲವೇ ಮಾಧ್ಯಮ ಪ್ರತಿನಿಧಿಗಳಿಗೆ ವಿಧಾನಸೌಧಕ್ಕೆ ಪ್ರವೇಶ ನೀಡು ವುದರ ಹಿಂದೆ ಬಿಜೆಪಿಯ ಅಜೆಂಡಾ ಅಡಗಿದೆ. ಅವರ ಪರವಾಗಿ ಬರೆಯುವ ಮಾಧ್ಯಮಗಳಿಗೆ ಅವಕಾಶ ನೀಡುವ ಪ್ರಯತ್ನ ನಡೆಸಿದೆ.
-ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next