Advertisement

Tamilnadu ಮಳೆಯ ಅಬ್ಬರಕ್ಕೆ 10 ಮಂದಿ ಬಲಿ… ಕೇಂದ್ರದ ನೆರವು ಕೋರಿದ ಸಿಎಂ ಸ್ಟಾಲಿನ್

08:34 AM Dec 20, 2023 | Team Udayavani |

ಚೆನ್ನೈ: ಕಳೆದ ಎರಡು ದಿನಗಳಲ್ಲಿ ತಮಿಳುನಾಡಿನ ದಕ್ಷಿಣ ಜಿಲ್ಲೆಗಳ ಹಲವು ಭಾಗಗಳಲ್ಲಿ ವರುಣನ ಅಬ್ಬರಕ್ಕೆ 10 ಮಂದಿ ಜೀವ ಕಳೆದುಕೊಂಡಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿರುವುದಾಗಿ ತಮಿಳುನಾಡು ಮುಖ್ಯ ಕಾರ್ಯದರ್ಶಿ ಶಿವ ದಾಸ್ ಮೀನಾ ತಿಳಿಸಿದ್ದಾರೆ.

Advertisement

ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದ ಪರಿಣಾಮ ತಿರುನಲ್ವೇಲಿ ಮತ್ತು ಟುಟಿಕೋರಿನ್ ಜಿಲ್ಲೆಗಳಲ್ಲಿ 10 ಜನರು ಸಾವನ್ನಪ್ಪಿದ್ದು. ಕೆಲವರು ಗೋಡೆ ಕುಸಿತದಿಂದ ಪ್ರಾಣ ಕಳೆದುಕೊಂಡರೆ, ಇನ್ನೂ ಕೆಲವರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಳೆಯ ಬಗ್ಗೆ ವಿವರ ನೀಡಿದ ಅಧಿಕಾರಿಗಳು ದಕ್ಷಿಣ ಜಿಲ್ಲೆಗಳು, ವಿಶೇಷವಾಗಿ ತಿರುನಲ್ವೇಲಿ ಮತ್ತು ಟುಟಿಕೋರಿನ್ ದಾಖಲೆಯ ಮಳೆ ಮತ್ತು ಪ್ರವಾಹಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು. ಇದೇ ವೇಳೆ ತಿರುನಲ್ವೇಲಿ ಜಿಲ್ಲಾಧಿಕಾರಿ ಕೆ.ಪಿ.ಕಾರ್ತಿಕೇಯನ್ ಅವರು ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಕುರಿತು ವಿವರ ನೀಡಿದ್ದು, ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ತಿರುನಲ್ವೇಲಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅದೇ ರೀತಿ ತುತ್ತುಕುಡಿ ಜಿಲ್ಲೆಗೂ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ರೈಲು ಸಂಚಾರಕ್ಕೆ ತೊಂದರೆಯಾಗಿದೆ ಎಂದು ಹೇಳಿದ್ದಾರೆ.

ಪ್ರವಾಹದಲ್ಲಿ ಸಿಲುಕಿದ್ದವರನ್ನು ರಕ್ಷಣೆ ಮಾಡಲು ಭಾರತೀಯ ಸೇನೆಯ ರಕ್ಷಣಾ ತಂಡ ಶ್ರೀವೈಕುಂಟಂ ತಲುಪಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದಿದ್ದಾರೆ.

Advertisement

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಂಗಳವಾರ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಹೆಚ್ಚಿನ ಹಣಕಾಸಿನ ನೆರವು ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ಮುಖ್ಯಮಂತ್ರಿ ಪ್ರವಾಹದ ಪರಿಹಾರಕ್ಕಾಗಿ ಪ್ರಧಾನಿ ಬಳಿ “ತಕ್ಷಣದ ಪರಿಹಾರಕ್ಕಾಗಿ 7,300 ಕೋಟಿ ಮತ್ತು ಶಾಶ್ವತ ಪರಿಹಾರಕ್ಕಾಗಿ 12,000 ಕೋಟಿ ಪರಿಹಾರ ನೀಡುವಂತೆ ಕೇಳಿದ್ದೇನೆ. ಈಗಾಗಲೇ ನಾವು ಪ್ರವಾಹ ಸಂತ್ರಸ್ತರಿಗೆ 6000 ರೂ.ಗಳನ್ನು ಘೋಷಿಸಿದ್ದೇವೆ. ಅದನ್ನು ವಿತರಿಸಲಾಗುತ್ತಿದೆ. ಕೇಂದ್ರದಿಂದ ಪೂರ್ಣ ಪ್ರಮಾಣದ ಪರಿಹಾರ ಮೊತ್ತ ಸಿಕ್ಕ ಬಳಿಕ ಮೂಲ ಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Daily Horoscope: ಕಷ್ಟದ ದಿನಗಳ ಅಂತ್ಯ, ಪ್ರಾಪ್ತ ವಯಸ್ಕರಿಗೆ ಕಂಕಣ ಭಾಗ್ಯದ ಭರವಸೆ

Advertisement

Udayavani is now on Telegram. Click here to join our channel and stay updated with the latest news.

Next