Advertisement

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ… 10 ಮಂದಿ ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

01:42 PM Aug 18, 2024 | |

ಉತ್ತರಪ್ರದೇಶ: ಬಸ್ ಮತ್ತು ಟೆಂಪೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹತ್ತು ಮಂದಿ ಮೃತಪಟ್ಟು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಭಾನುವಾರ (ಆಗಸ್ಟ್ 18) ದಂದು ನಡೆದಿದೆ.

Advertisement

ಪೊಲೀಸರ ಮಾಹಿತಿ ಪ್ರಕಾರ, ಖಾಸಗಿ ಬಸ್‌ನಲ್ಲಿ 25ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಸೇಲಂಪುರ ಸಮೀಪ ಟೆಂಪೋಗೆ ಬಸ್ಸು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಪರಿಣಾಮ ಹತ್ತು ಮಂದಿ ಮೃತಪಟ್ಟಿದ್ದಾರೆ ಮತ್ತು ಇಪ್ಪತ್ತು ಮಂದಿ ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಘಟನೆಯಿಂದ ಎರಡೂ ವಾಹನಗಳು ನುಜ್ಜುಗುಜ್ಜಾಗಿದ್ದು ಪೊಲೀಸರು ಹಾಗೂ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು ಎನ್ನಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಜೈಪುರದ ಕೆಲ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ… ಅಧಿಕಾರಿಗಳಿಂದ ಕಾರ್ಯಾಚರಣೆ

Advertisement

 

Advertisement

Udayavani is now on Telegram. Click here to join our channel and stay updated with the latest news.

Next