Advertisement

Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ

01:12 PM May 28, 2024 | Team Udayavani |

ಮಿಜೋರಾಂ: ಕಲ್ಲು ಕ್ವಾರಿ ಕುಸಿತ ಉಂಟಾಗಿ ಕನಿಷ್ಠ 10 ಮಂದಿ ಮೃತಪಟ್ಟು, ಹಲವರು ನಾಪತ್ತೆಯಾಗಿರುವ ಘಟನೆ ಮಂಗಳವಾರ(ಮೇ.28 ರಂದು) ಮುಂಜಾನೆ ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

ನಿರಂತರ ಮಳೆ ಸುರಿದ ಪರಿಣಾಮ ಮುಂಜಾನೆ 6 ಗಂಟೆಗೆ ಐಜ್ವಾಲ್ ಪಟ್ಟಣದ ದಕ್ಷಿಣ ಹೊರವಲಯದಲ್ಲಿರುವ ಮೆಲ್ತಮ್ ಮತ್ತು ಹ್ಲಿಮೆನ್ ನಡುವಿನ ಪ್ರದೇಶದಲ್ಲಿ ಈ ಕಲ್ಲು ಕ್ವಾರಿ ಕುಸಿತ ಉಂಟಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕ್ವಾರಿ ಕುಸಿತದ ಪರಿಣಾಮ 10 ಮಂದಿ ಮೃತಪಟ್ಟಿದ್ದು, ಇನ್ನು ಹಲವರು ಅವಶೇಷದಡಿ ಸಿಲುಕಿಕೊಂಡಿದ್ದಾರೆ. ಇದರಿಂದಾಗಿ ಅಕ್ಕಪಕ್ಕದ ಹಲವು ಮನೆಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೃತಪಟ್ಟವರು ಕಾರ್ಮಿಕರಾಗಿದ್ದು ಇವರು ಹೊರ ರಾಜ್ಯದವರು ಎನ್ನಲಾಗಿದೆ.

ಕೆಲ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ. ಆದರೆ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

Advertisement

ರಕ್ಷಣಾ ಕಾರ್ಯಾಚರಣೆಯಲ್ಲಿ ಒಂದು ಮಗು ಸಹಿತ ಇತರರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಳೆಯ ಹಿನ್ನೆಲೆಯಲ್ಲಿ, ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ ಮತ್ತು ಅಗತ್ಯ ಸೇವೆಗಳನ್ನು ಒದಗಿಸುವವರನ್ನು ಹೊರತುಪಡಿಸಿ ಸರ್ಕಾರಿ ನೌಕರರನ್ನು ಮನೆಯಿಂದಲೇ ಕೆಲಸ ಮಾಡಲು ತಿಳಿಸಲಾಗಿದೆ ಎಂದು ವರದಿ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next