Advertisement

10 ಮೊಬೈಲ್‌ ಲಸಿಕಾ ತಂಡ ರಚನೆ

06:06 PM Nov 12, 2021 | Team Udayavani |

ಶ್ರೀರಂಗಪಟ್ಟಣ: ತಾಲೂಕಿನಲ್ಲಿ ಎರಡನೇ ಹಂತದ ಕೋವಿಡ್‌ ಲಸಿಕೆಯನ್ನು 11,645 ಮಂದಿಗೆ ನೀಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ತಿಳಿಸಿ ದರು.

Advertisement

ತಾಲೂಕಿನಾದ್ಯಂತ ಪ್ರತಿಯೊಂದು ಗ್ರಾಮಗಳಿಗೆ ತೆರಳಿ 59 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 10 ಮೊಬೈಲ್‌ ಲಸಿಕಾ ತಂಡ ರಚನೆ ಮಾಡಲಾಗಿತ್ತು. ಆಶಾ, ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿ ಸೇರಿ ಸುಮಾರು 250 ಮಂದಿ ಸಿಬ್ಬಂದಿ ಎರಡನೇ ಹಂತದ ಲಸಿಕೆ ಹಾಕಲು ಮನೆ ಮನೆಗಳಿಗೆ ತೆರಳಿ ಕೆಲಸ ಮಾಡಿದರು.

ಇದನ್ನೂ ಓದಿ:- ಮೃತ ಗರ್ಭಿಣಿ ಹೊಟ್ಟೆಯಲ್ಲಿದ್ದಮಗುವನ್ನು ರಕ್ಷಿಸಿದ ವೈದ್ಯರು!

ತಾಲೂಕಿನಲ್ಲಿ 16 ಸಾವಿರ ಲಸಿಕೆ ಹಾಕಲು ಮುಂದಾಗಿದ್ದು, ನಂ.10ರಂದು 11,645 ಮಂದಿಗೆ ಲಸಿಕೆ ನೀಡಲಾಗಿದೆ. ಇನ್ನೂ ಸಹ ತಾಲೂಕಿನ ಆಸ್ಪತ್ರೆಗಳಲ್ಲಿ ನೀಡಲಾಗುತ್ತದೆ. ಎರಡನೇ ಹಂತದ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳದಿರುವ ಸಾರ್ವಜನಿಕರು ಆಸ್ಪತ್ರೆಗಳಿಗೆ ಹೋಗಿ ಲಸಿಕೆ ಪಡೆದು ಕೊಳ್ಳಬೇಕು ಎಂದರು. ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಮಾರುತಿ, ಆರೋಗ್ಯ ಶಿಕ್ಷಣ ಅಧಿಕಾರಿ ಬೆನ್ನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next