ನವದೆಹಲಿ: ಕೋವಿಡ್ ನ ಹೊಸ ರೂಪಾಂತರ ತಳಿ ಒಮಿಕ್ರಾನ್ ನ ಹತ್ತು ಪ್ರಕರಣಗಳು ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪತ್ತೆಯಾಗುವ ಮೂಲಕ ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಹುಬ್ಬಳ್ಳಿಯ ವ್ಯಕ್ತಿಯ ಮೂತ್ರಪಿಂಡದಲ್ಲಿತ್ತು ದಾಖಲೆಯ 156 ಕಲ್ಲುಗಳು !
20 ಮಂದಿಯಲ್ಲಿ ಈಗಾಗಲೇ ಹತ್ತು ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.
ಗುರುವಾರ (ಡಿಸೆಂಬರ್ 16) ದೆಹಲಿಯಲ್ಲಿ 85 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಕಳೆದ ನಾಲ್ಕು ತಿಂಗಳಲ್ಲಿನ ಗರಿಷ್ಠ ಪ್ರಮಾಣದ್ದಾಗಿದೆ ಎಂದು ವರದಿ ಹೇಳಿದೆ. ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,447 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 391 ಮಂದಿ ಸಾವನ್ನಪ್ಪಿದ್ದಾರೆ.
24ಗಂಟೆಯಲ್ಲಿ 7,886 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಅಲ್ಲದೇ 830 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ವರದಿ ವಿವರಿಸಿದೆ.
ಮಹಾರಾಷ್ಟ್ರದಲ್ಲಿ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 1,41,317, ಕೇರಳದಲ್ಲಿ 43,946, ಕರ್ನಾಟಕದಲ್ಲಿ 38,279, ತಮಿಳುನಾಡಿನಲ್ಲಿ 36,656, ದೆಹಲಿಯಲ್ಲಿ 25,100, ಉತ್ತರಪ್ರದೇಶದಲ್ಲಿ 22,915 ಎಂದು ವರದಿ ತಿಳಿಸಿದೆ.