ಶಿವಮೊಗ್ಗ: ಜಿಲ್ಲೆಯಲ್ಲಿಂದು ಹತ್ತು ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 83ಕ್ಕೆ ಏರಿಕೆಯಾಗಿದೆ.
ಇಂದಿನ ಹತ್ತು ಸೋಂಕಿತರ ಪೈಕಿ ಎಂಟು ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಮತ್ತೋಬ್ಬರು ಸ್ವಾಮೀಜಿಗೆ ಸೋಂಕು ದೃಢಪಟ್ಟಿದೆ. ಇನ್ನೋರ್ವ ಮಹಿಳೆಗೆ ಕೋವಿಡ್-19 ಸೋಂಕು ಹೇಗೆ ಬಂತು ಎಂದು ಜಿಲ್ಲಾಡಳಿತ ಪತ್ತೆ ಹಚ್ಚುತ್ತಿದೆ.
ಇದುವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 83 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ 83 ಪ್ರಕರಣಗಳ ಪೈಕಿ 31 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಪ್ರಸ್ತುತ ಶಿವಮೊಗ್ಗದಲ್ಲಿ 52 ಕೋವಿಡ್ ಸಕ್ರಿ ಪ್ರಕರಣಗಳಿವೆ.
ಶಿವಮೊಗ್ಗ ಹೊರವಲಯದ ಮಠದ ಸ್ವಾಮೀಜಿಗೆ ಇಂದು ಕೋವಿಡ್-19 ಸೋಂಕು ದೃಢವಾಗಿದ್ದು, ಈ ಮಠದ ಆವರಣವನ್ನು ಜಿಲ್ಲಾಡಳಿತ ಸೀಲ್ ಡೌನ್ ಮಾಡಿದೆ.
ರಾಜ್ಯದಲ್ಲಿಂದು 204 ಹೊಸ ಪ್ರಕರಣಗಳು ದೃಢವಾಗಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 114 ಮಂದಿ ಬಿಡುಗಡೆಯಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಒಟ್ಟು 2976 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 72 ಮಂದಿ ಸೋಂಕಿನ ಕಾರಣದಿಂದ ಮರಣ ಹೊಂದಿದ್ದರೆ, ರಾಜ್ಯದಲ್ಲಿ ಇಬ್ಬರು ಸೋಂಕಿತರು ಕೋವಿಡ್-19 ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.