Advertisement

Resign from Lok Sabha: ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಹತ್ತು ಮಂದಿ ಬಿಜೆಪಿ ಸಂಸದರು

03:40 PM Dec 06, 2023 | Team Udayavani |

ನವದೆಹಲಿ: ಇತ್ತೀಚಿಗೆ ನಡೆದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ 12 ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದರ ಪೈಕಿ ಹತ್ತು ಮಂದಿ ಸಂಸದರು ಬುಧವಾರ ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

Advertisement

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ನೇತೃತ್ವದಲ್ಲಿ ಸಂಸದರ ನಿಯೋಗ ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾಗಿ ಸಂಸತ್ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದವರಲ್ಲಿ ಮಧ್ಯಪ್ರದೇಶದ ನರೇಂದ್ರ ತೋಮರ್, ಪ್ರಹ್ಲಾದ್ ಪಟೇಲ್, ರಿತಿ ಪಾಠಕ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಸಿಂಗ್ ಸೇರಿದ್ದಾರೆ. ರಾಜಸ್ಥಾನದ ಸಂಸದರಾದ ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ ಸೇರಿದ್ದರೆ ಛತ್ತೀಸ್‌ಗಢದ ಅರುಣ್ ಸಾವೊ ಮತ್ತು ಗೋಮತಿ ಸಾಯಿ ಸೇರಿದ್ದಾರೆ.

ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಬಹುಮತದ ಗಡಿ ದಾಟಿದ ನಂತರ ಕಾಂಗ್ರೆಸ್ ಅನ್ನು ಮಣಿಸಿ ಸರ್ಕಾರ ರಚಿಸಲು ಸಿದ್ಧವಾಗಿದೆ.

ಇದನ್ನೂ ಓದಿ: BSY: ಅಲ್ಪಸಂಖ್ಯಾತರ ಓಲೈಕೆಯಿಂದ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡದು: ಬಿಎಸ್ ವೈ

Advertisement
Advertisement

Udayavani is now on Telegram. Click here to join our channel and stay updated with the latest news.

Next