Advertisement

ಟ್ರ್ಯಾಕ್ಟರ್‌ ಟ್ರಾಲಿ-ಜೀಪ್‌ ಢಿಕ್ಕಿ; ಒಂದೇ ಕುಟುಂಬದ 10 ಮಂದಿ ಸಾವು; 8 ಮಂದಿಗೆ ಗಾಯ

08:01 PM Apr 19, 2022 | Team Udayavani |

ಜೈಪುರ: ಟ್ರ್ಯಾಕ್ಟರ್‌ ಟ್ರಾಲಿ ಮತ್ತು ಜೀಪ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 10 ಮಂದಿ ಸಾವನ್ನಪಿದ್ದು 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜುಂಜುನು ಎಂಬಲ್ಲಿ ಮಂಗಳವಾರ (ಎ.19) ಸಂಭವಿಸಿದೆ.

Advertisement

ಜುಂಜುನು-ಗುಧಾ ಗೋಡ್ಜಿ ಹೆದ್ದಾರಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ ಟ್ರಾಲಿಗೆ ಜೀಪ್‌ ಢಿಕ್ಕಿ ಹೊಡೆದ ಪರಿಣಾಮ ಜೀಪ್‌ ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿದ್ದು ಮತ್ತು 8 ಮಂದಿಗೆ ಗಾಯಗೊಂಡಿದ್ದಾರೆ ಎಂದು ಜುಂಜುನು ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಮೋಹನ್‌ ಶರ್ಮಾ ಹೇಳಿದ್ದಾರೆ.

ಜೀಪ್‌ ನಲ್ಲಿ ಇದ್ದ ಪ್ರಯಾಣಿಕರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹಿಂತಿರುತ್ತಿದ್ದಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಂಭೀರ ಗಾಯಗೊಂಡಿರುವವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

ಇದನ್ನೂ ಓದಿ:ಕೃಷಿ ಸಚಿವರ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ಸಾಗುತ್ತಿದ್ದವರು ರಸ್ತೆ ಅಪಘಾತದಲ್ಲಿ ಸಾವು

Advertisement

ಸಂತಾಪ
ಈ ಅಪಘಾತದಲ್ಲಿ ಸಾವನ್ನಪ್ಪಿರುವ ಕುಟುಂಬಕ್ಕೆ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಟ್ವೀಟರ್‌ ನಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಮತ್ತು ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

Advertisement

Udayavani is now on Telegram. Click here to join our channel and stay updated with the latest news.

Next