Advertisement

10 ಜನರ ಕೊಲೆಗೈದು, ಆತ್ಮಹತ್ಯೆ ಮಾಡಿಕೊಂಡ

03:45 AM Jan 05, 2017 | Team Udayavani |

ಅಮೇಠಿ (ಉ.ಪ್ರ.): ವ್ಯಕ್ತಿಯೊಬ್ಬ ತನ್ನ ಕುಟುಂಬದ 10 ಮಂದಿ ಸದಸ್ಯರನ್ನು ಹತ್ಯೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಮಹೊ°àವಾ ಎಂಬಲ್ಲಿ ಬುಧವಾರ ನಡೆದಿದೆ. ಜಮಾಲು (45) ಎಂಬಾತ ತನ್ನ ಕುಟುಂಬದ 12 ಮಂದಿಗೆ ವಿಷ ಉಣಿಸಿ, ಬಳಿಕ ಅವರ ಕತ್ತುಕೊಯ್ದು ಹತ್ಯೆ ಮಾಡಿದ್ದಾನೆ. ನಂತರ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷ ತಿಂದ 12 ಮಂದಿ ಪೈಕಿ 10 ಮಂದಿ ಸಾವನ್ನಪ್ಪಿದ್ದು, ಅವರಲ್ಲಿ ಇಬ್ಬರು ಮಹಿಳೆಯರು ಮತ್ತು 8 ಮಕ್ಕಳು ಸೇರಿದ್ದಾರೆ. ಇಬ್ಬರು ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next