ಚಿಕ್ಕಬಳ್ಳಾಪುರ: ಇತ್ತೀಚೆಗೆ ದನದ ಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಕಾರ್ಯಾಚರಣೆ ನಡೆಸಿ ಬಂಧಿಸಿದ್ದ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದರ ಹಿನ್ನೆಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದ ಜಿಲ್ಲೆಯ ಹತ್ತು ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಕೋವಿಡ್ ನೆಗೆಟಿವ್ ಬಂದಿದೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಈ ಕುರಿತು ಸುದ್ದಿಗೋಷ್ಠಿಯನ್ನು ದ್ದೇಶಿಸಿ ಮಾತನಾಡಿದ ಅವರು, ಗೌರಿ ಬಿದನೂರು ತಾಲೂಕಿನಲ್ಲಿ ಏ.23 ರಂದು ಆಂಧ್ರಪ್ರದೇಶದದಿಂದ ಮೂವರು ವ್ಯಕ್ತಿಗಳು ವಾಹನದಲ್ಲಿ ಅಕ್ರಮವಾಗಿ ದನದ ಮಾಂಸ ತರುವುದನ್ನು ಖಚಿತ ಪಡಿಸಿಕೊಂಡು ಪೊಲೀಸರು ದಾಳಿ ನಡೆಸಿದ್ದರು. ಬಂಧಿತನಾದ ಚಿಕ್ಕಬಳ್ಳಾಪುರ ನಗರದ ಯುವಕನಿಗೆ ಆರೋಗ್ಯ ತಪಾಸಣೆ ವೇಳೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿತ್ತು. ಅದೃಷ್ಟವಶಾತ್ ಅವರ ವೈದ್ಯಕೀಯ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಈ ವಿಷಯ ಳಿದು ಕೇಂದ್ರ ವಲಯದ ಐಜಿಪಿ ಕೆ.ವಿ.ಶರತ್ ಚಂದ್ರ ಜಿಲ್ಲೆಗೆ ಆಗಮಿಸಿ ಕ್ವಾರಂಟೈನ್‌ನಲ್ಲಿದ್ದ ಪೊಲೀಸ್ ಅಧಿಕಾರಿ, ಸಿಬ್ಬಂದಿಯ ಯೋಗಕ್ಷೇಮ ವಿಚಾರಿಸಿದ್ದರು.
5 ಅಡಿ ಅಂತರದಿಂದ ಪರಿಶೀಲಿಸಿ: 50 ವರ್ಷಕ್ಕಿಂತ ಮೇಲ್ಪಟ್ಟ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಕೋವಿಡ್-19 ಕಂಟೈನ್‌ಮೆಟ್ ವಲಯದಲ್ಲಿ ನಿಯೋಜಿಸಬಾರದು. ಪ್ರತಿದಿನ 15% ಸಿಬ್ಬಂದಿ ಕಡ್ಡಾಯವಾಗಿ ರಜೆ ಪಡೆಯಬೇಕು..ಇದು ಅಧಿಕಾರಿಗಳಿಗೂ ಅನ್ವಯಿಸುತ್ತದೆ .ವೈದ್ಯರ ಸೂಚನೆಯ ಮೇರೆಗೆ ಅಗತ್ಯವಿದ್ದರೆ ಹೈಡ್ರಾಕ್ಸಿ ಕ್ಲೋರೊಕ್ವಿನ್ ತೆಗೆದುಕೊಳ್ಳುಬೇಕು ಸ್ವಯಂಪ್ರೇರಿತವಾಗಿ ಹಾಗೂ ವಾಹನಗಳ ತಪಾಸಣೆ ಮಾಡುವ ವೇಳೆಯಲ್ಲಿ ಯಾವುದೇ ವ್ಯಕ್ತಿ ಅಥವಾ ವಾಹನವನ್ನು ಸ್ಪರ್ಶ ಮಾಡಬಾರದು ಹಾಗೂ 5 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು… ಹಾಗೂ ಈಗಾಗಲೇ ತಿಳಿಸಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್ ಕುಮಾರ್ ತಮ್ಮ
ಅಧೀನ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚಿಸಿದ್ದಾರೆ.