Advertisement

Heatstroke; ಬಿಹಾರದಲ್ಲಿ ಬಿಸಿಲ ಝಳಕ್ಕೆ 10 ಮತಗಟ್ಟೆ ಸಿಬಂದಿ ಮೃತ್ಯು

10:12 PM May 31, 2024 | Team Udayavani |

ಹೊಸದಿಲ್ಲಿ: ಬಿಹಾರದಲ್ಲಿ ಕಳೆದ 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬಂದಿ ಸೇರಿದಂತೆ 14 ಮಂದಿ ಬಿಸಿಲ ಝಳದ ಹೊಡೆತಕ್ಕೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ತಿಳಿಸಿದ್ದಾರೆ.

Advertisement

ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಹೇಳಿಕೆಯಲ್ಲಿ, ಹೆಚ್ಚಿನ ಸಾವುನೋವುಗಳು ಭೋಜ್‌ಪುರದಲ್ಲಿ ವರದಿಯಾಗಿದೆ, ಅಲ್ಲಿ ಚುನಾವಣ ಕರ್ತವ್ಯದಲ್ಲಿದ್ದ ಐವರು ಅಧಿಕಾರಿಗಳು ಶಾಖದ ಹೊಡೆತದಿಂದ ಸಾವನ್ನಪ್ಪಿದ್ದಾರೆ. ಇತರು ರಾಜ್ಯದ ವಿವಿಧ ಭಾಗಗಳಲ್ಲಿ ಬಲಿಯಾಗಿದ್ದಾರೆ. ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಲವೆಡೆ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ದಾಟಿದ್ದರಿಂದ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದೆ. ಗುರುವಾರ, ಬಕ್ಸಾರ್ ನಲ್ಲಿ 47.1 ಡಿಗ್ರಿ ಸೆಲ್ಸಿಯಸ್‌ನಲ್ಲಿ ಅತ್ಯಂತ ಹೆಚ್ಚಿನ ತಾಪಮಾನ ದಾಖಲಾಗಿತ್ತು.

ಇದನ್ನೂ ಓದಿ: Final; ವಾರಾಣಸಿ ಸೇರಿ 57 ಕ್ಷೇತ್ರಗಳಲ್ಲಿ ನಾಳೆ ಕೊನೆಯ ಹಂತದ ವೋಟಿಂಗ್

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಶುಕ್ರವಾರ ರಾಜಸ್ಥಾನ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಪೂರ್ವ ಮಧ್ಯಪ್ರದೇಶ, ಒಡಿಶಾ, ಜಾರ್ಖಂಡ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಛತ್ತೀಸ್‌ಗಢ.ವಿದರ್ಭ, ಪಶ್ಚಿಮದ ಹಲವು ಭಾಗಗಳಲ್ಲಿ ತೀವ್ರತರವಾದ ಬಿಸಿಗಾಳಿ ಇದೆ.

Advertisement

ರಾಜಸ್ಥಾನ, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಒಡಿಶಾ, ಪೂರ್ವ ಮಧ್ಯಪ್ರದೇಶ ಮತ್ತು ವಿದರ್ಭದ ಭಾಗಗಳಲ್ಲಿ ಗುರುವಾರ ಗರಿಷ್ಠ ತಾಪಮಾನ 45-48 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಗಳ ಪ್ರಕಾರ, ಮುಂದಿನ ಮೂರು ದಿನಗಳಲ್ಲಿ ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಇಳಿಕೆಯಾಗುವ ಸಾಧ್ಯತೆಯಿದೆ. ಪೂರ್ವ ಭಾರತದಲ್ಲಿ ತಾಪಮಾನವು 3-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next