Advertisement
ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಮತ ಎಣಿಕೆ ಕಾರ್ಯದ ಪೂರ್ವ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮತ ಎಣಿಕೆ ಕೇಂದ್ರಕ್ಕೆ ಅವಶ್ಯ ಮೂಲ ಸೌಕರ್ಯಗಳಾದ ಕುಡಿಯುವ ನೀರು ಮತ್ತಿತರ ಸೌಲಭ್ಯಗಳನ್ನು ಕಲ್ಪಿಸುವಂತೆ ನಗರಸಭೆ ಆಯುಕ್ತರಿಗೆ ಡೀಸಿ ಸೂಚಿಸಿದರು.
Related Articles
Advertisement
ಗುರುಚಿನ ಚೀಟಿ ಕಡ್ಡಾಯ: ಮತ ಎಣಿಕೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಕೇಂದ್ರದಲ್ಲಿ ಮಾಡಲಾಗಿದೆ. ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಕೇಂದ್ರದೊಳಗೆ ಕಡ್ಡಾಯವಾಗಿ ಚುನಾವಣಾ ಆಯೋಗ ನೀಡಿರುವ ಗುರುತಿನ ಪತ್ರ ಇದ್ದವರಿಗೆ ಮಾತ್ರ ಒಳಗೆ ಪ್ರವೇಶವಿರುತ್ತದೆ.
ಮತ ಎಣಿಕೆಗೆ ಅವಶ್ಯವಿರುವ ಸಾಮಗ್ರಿಗಳನ್ನು ವಿತರಿಸುವ ಬಗ್ಗೆ ಮೇಲ್ವಿಚಾರಕರು ಎಚ್ಚರದಿಂದ ನೋಡಿಕೊಳ್ಳಬೇಕು. ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿಗಳು, ಸಿಬ್ಬಂದಿಗಳ ಮತ್ತು ಅಭ್ಯರ್ಥಿಗಳು ಎಣಿಕೆ ಮೇಲ್ವಿಚಾರಕರು ಮೊಬೈಲ್ ಫೋನ್‌ಗಳ ಬಳಕೆ ಹಾಗೂ ತರುವುದನ್ನು ನಿಷೇಧಿಸಲಾಗಿದೆ ಎಂದರು.
ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಕಾರ್ಯನಿರ್ವಹಿಸುವ ಮೂಲಕ ಮತ ಎಣಿಕೆ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಕೇಂದ್ರದ ಸುತ್ತಮುತ್ತ ಸ್ವತ್ಛತೆ ಕಾಪಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ನಗರಸಭೆ ಆಯುಕ್ತರಿಗೆ ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು.
ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ, ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಎ.ಎನ್. ರಘುನಂದನ್, ಚಿಕ್ಕಬಳ್ಳಾಪುರ ಉಪ ವಿಭಾಗದ ಡಿವೈಎಸ್‌ಪಿ ರವಿಶಂಕರ್, ಜಿಪಂ ಉಪ ಕಾರ್ಯದರ್ಶಿ ನೋಮೇಶ್‌ಕುಮಾರ್, ಸಹಾಯಕ ಚುನಾವಣಾ ಅಧಿಕಾರಿಗಳಾದ ಕೆ.ನರಸಿಂಹಮೂರ್ತಿ, ಶ್ರೀನಿವಾಸ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮತ ಎಣಿಕೆ ಮೇಲ್ವಿಚಾರಕರಿಗೆ ತರಬೇತಿ: ಮತ ಎಣಿಕೆ ಕಾರ್ಯದಲ್ಲಿ ಭಾಗವಹಿಸಲಿರುವ ಮೇಲ್ವಿಚಾರಕರು ಸಹಾಯಕ ಹಾಗೂ ಸೂಕ್ಷ್ಮ ವೀಕ್ಷಕರಿಗೆ ಶನಿವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮತ ಎಣಿಕೆ ಬಗ್ಗೆ ಸಮಗ್ರ ತರಬೇತಿಯನ್ನು ರಾಜ್ಯ ಮಟ್ಟದ ಮಾಸ್ಟರ್ ತರಬೇತುದಾರರಾದ ಶಂಕರ ರೆಡ್ಡಿ ಸಿ.ಎನ್. ಸಮಗ್ರ ತರಬೇತಿ ನೀಡಿದರು.
ಇವಿಎಂ ಹಾಗೂ ವಿವಿಪ್ಯಾಟ್‌ಗಳನ್ನು ತೆರೆಯುವುದರಿಂದ ಹಿಡಿದು ಚಲಾವಣೆಗೊಂಡಿರುವ ಮತಗಳನ್ನು ಸವಿವರವಾಗಿ ಪಡೆಯುವ ಬಗ್ಗೆ ತರಬೇತುದಾರರು, ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನವನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಚುನಾವಣಾಧಿಕಾರಿ ರಘುನಂದನ್, ಜಿಲ್ಲಾ ಉದ್ಯೋಗಾಧಿಕಾರಿ ಪ್ರಸಾದ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಅಶೋಕ್ ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ ಬಿಬಿ ರಸ್ತೆಯಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊಳ್ಳಲಿದ್ದು, 10 ಟೇಬಲ್‌ಗಳಲ್ಲಿ 26 ಸುತ್ತುಗಳಲ್ಲಿ ಎಣಿಕೆ ಕಾರ್ಯ ನಡೆಯಲಿದೆ. ಪಾರದರ್ಶಕವಾಗಿ ಮತ ಎಣಿಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. -ಆರ್.ಲತಾ, ಜಿಲ್ಲಾಧಿಕಾರಿ