Advertisement
ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಜಲಸಂಪನ್ಮೂಲ ಇಲಾಖೆ ಹಿರಿಯ ಅಧಿಕಾರಿಗಳ ನಿಯೋಗ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ನಿರ್ಧರಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೂರು ಕ್ಷೇತ್ರಗಳ ಉಪಚುನಾವಣೆ ಮುಕ್ತಾಯಗೊಂಡ ಬಳಿಕ ಕೇಂದ್ರ ಸಚಿವರ ಭೇಟಿಗೆ ಸಮಯ ಕೋರಲು ತೀರ್ಮಾನಿಸಲಾಗಿದೆ. ಕೆಲವು ತಿಂಗಳುಗಳ ಹಿಂದೆ ತುಂಗಭದ್ರಾ ಜಲಾಶಯದ ಗೇಟ್ ಮುರಿದು ನೀರು ನಷ್ಟವಾದ ಬಳಿಕ ಜಲಾಶಯ ದುರಸ್ತಿಗೆ ಚಿಂತಿಸಲಾಗಿತ್ತು.
ದುರಸ್ತಿ ಕಾರ್ಯದಪ್ರಸ್ತಾವ ಸಿದ್ಧಪಡಿಸಲಾಗುತ್ತಿದೆ. ಕೇಂದ್ರ ಸರಕಾರದ “ಡ್ರಿಪ್’ ಯೋಜನೆ ಅನ್ವಯ ಹಣಕಾಸು ನೆರವು ಕೋರುವುದಕ್ಕೆ ನಿರ್ಧರಿಸಲಾಗಿದೆ. ಇದರ ಜತೆಗೆ ರಾಜ್ಯದಲ್ಲಿ ಬಾಕಿ ಉಳಿದಿರುವ ನೀರಾವರಿ ಹಾಗೂ ಕೃಷಿ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೆ ಅಗತ್ಯವಾದ ಹಣಕಾಸು ನೆರವು ಕೊಡುವಂತೆ ಭೇಟಿಯ ಸಂದರ್ಭದಲ್ಲಿ ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ.