Advertisement

ಟಿಬಿ ಡ್ಯಾಂನಲ್ಲಿ 10 ಟಿಎಂಸಿ ನೀರು ಸಂಗ್ರಹ

09:42 AM Jun 22, 2021 | Team Udayavani |

ಹೊಸಪೇಟೆ: ತುಂಗಭದ್ರಾ ಜಲಾಶಯದಲ್ಲಿ ಅಪಾರ ಪ್ರಮಾಣದಲ್ಲಿ ಒಳ ಹರಿವು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಕೇವಲ ಮೂರೇ ದಿನದಲ್ಲಿ 10 ಟಿಎಂಸಿಯಷ್ಟು ನೀರು ಹರಿದು ಬಂದಿದೆ.

Advertisement

ತುಂಗಭದ್ರಾ ಜಲಾಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಕ್ಕೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ತುಂಗಭದ್ರಾ ಜಲಾಶಯದಲ್ಲಿ ಸದ್ಯ ಜಲರಾಶಿಯಿಂದ ಕಂಗೊಳಿಸುತ್ತಿದ್ದು, ಈ ವರ್ಷ ಬೇಗ ನೀರಿನ ಒಳಹರಿವು ದಾಖಲಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಜಲಾಶಯದಲ್ಲಿ ನೀರು ಸಂಗ್ರಹ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಜೂನ್‌ ಮೊದಲ ವಾರದಲ್ಲಿ ನೀರಿನ ಒಳಹರಿವು ಆರಂಭವಾಗಿದ್ದು ವಿಶೇಷ.

ಕಳೆದ ವರ್ಷ ಜುಲೈ ತಿಂಗಳಲ್ಲಿ ನೀರಿನ ಒಳಹರಿವು ಆರಂಭವಾಗಿದ್ದರೆ, ಈ ಬಾರಿ ಜೂನ್‌ ಮೊದಲ ವಾರದಿಂದಲೇ ಜಲಾಶಯಕ್ಕೆ ನೀರಿನ ಒಳಹರಿವು ದಾಖಲಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಒಳಹರಿವಿನ ಪ್ರಮಾಣ 40 ಸಾವಿರ ಕ್ಯೂಸೆಕ್‌ಗೂ ಹೆಚ್ಚು ತಲುಪಿದೆ. ಕಳೆದ ಮೂರು ದಿನಗಳಲ್ಲಿ ಜಲಾಶಯಕ್ಕೆ ಸರಿಸುಮಾರು 10 ಟಿಎಂಸಿ ನೀರು ಹರಿದು ಬಂದಿರುವುದು ಗಮನಾರ್ಹವಾಗಿದೆ.

ತುಂಗಭದ್ರಾ ಜಲಾಶಯದ ನೀರಿನ ಮಟ್ಟ 1633 ಇದ್ದು, ಸದ್ಯ 1600 ಅಡಿಗೆ ತಲುಪಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 14 ಟಿಎಂಸಿಯಷ್ಟು ನೀರು ಹೆಚ್ಚು ಸಂಗ್ರಹವಾಗಿದೆ. ಸೋಮವಾರ 20.070 ಕ್ಯುಸೆಕ್‌ ನೀರು ಬರುತ್ತಿದ್ದು, ಇನ್ನೂ ಮೂರು ನಾಲ್ಕು ದಿನಗಳ ಕಾಲ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next