ಗದಗ: ಬೆಟಗೇರಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಹಾಸಿಗೆಗಳ ಆಸ್ಪತ್ರೆಯನ್ನು ಸೋಂಕಿತರ ಚಿಕಿತ್ಸೆಗೆ ನಾಳೆಯಿಂದಲೇ ಪ್ರಾರಂಭಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಆರೋಗ್ಯ ಇಲಾಖೆ, ಔಷಧ ನಿಯಂತ್ರಕರ, ಸಾರಿಗೆ ಇಲಾಖೆ, ಜಿಲ್ಲಾ ಕೈಗಾರಿಕೆ ಕೇಂದ್ರದ ಅಧಿ ಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಟಗೇರಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 30 ಆಕ್ಸಿಜನ್ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು, ಸೋಂಕಿತರನ್ನು ದಾಖಲಿಸುವ ಮುನ್ನ ಅಲ್ಲಿನ ಮೂಲ ಸೌಲಭ್ಯ ಪರಿಶೀಲಿಸಬೇಕು. ಅಗತ್ಯ ವೈದ್ಯಕೀಯ ಸಿಬ್ಬಂದಿ ನಿಯೋಜಿಸಲು ಕ್ರಮ ಜರುಗಿಸುವಂತೆ ಸೂಚಿಸಿದರು. ನಾಳೆ ಒಳಗಾಗಿ ಜಿಮ್ಸ್ ಆಸ್ಪತ್ರೆಗೆ 10 ವೆಂಟಿಲೇಟರ್ ಬರಲಿದ್ದು, ಕೂಡಲೇ ಕಾರ್ಯಾರಂಭಕ್ಕೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು. ಹೆಚ್ಚುವರಿ 30 ವೆಂಟಿಲೇಟರ್ ಗಳಿಗಾಗಿ ಪ್ರಯತ್ನಿಸಲಾಗುತ್ತಿದೆ. ತಾಲೂಕು ಆಸ್ಪತ್ರೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಒಟ್ಟು 240 ಹಾಸಿಗೆ ಲಭ್ಯವಿದ್ದು, 100 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಖಾಲಿ ಇರುವ ಹಾಸಿಗೆಗಳಿಗೆ ಅನುಗುಣವಾಗಿ ತಾಲೂಕು ಕೇಂದ್ರದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವಂತೆ ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಚಿಕಿತ್ಸೆ, ಔಷಧ , ಆಹಾರ ಹಾಗೂ ಸಾರಿಗೆ ವ್ಯವಸ್ಥೆ ಉಚಿತವಾಗಿ ಒದಗಿಸಬೇಕು. ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇ ಲೋಪವಾಗದಂತೆ ವೈದ್ಯರು ಅಧಿ ಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸಬೇಕು ಎಂದರು.
ಸದ್ಯದ ಪರಿಸ್ಥಿತಿಯಲ್ಲಿ ಜಿಲ್ಲೆಗೆ ಆಕ್ಸಿಜನ್ ಕೊರತೆ ಇಲ್ಲ. ಆದರೂ, ಆಕ್ಸಿಜನ್ ದಾಸ್ತಾನಿನಲ್ಲಿ ಕೊರತೆ ಉಂಟಾಗದಂತೆ ಸಂಬಂಧಿ ತರು ಗಮನ ಹರಿಸಬೇಕು. ಆಕ್ಸಿಜನ್ ಟ್ಯಾಂಕ್ ಮೇಲುಸ್ತುವಾರಿ ನೋಡಿಕೊಳ್ಳಲು ನೋಡಲ್ ಅಧಿ ಕಾರಿ ನೇಮಿಸಿ, ಅದಕ್ಕೆ ಭದ್ರತೆ ಒದಗಿಸಲು ಆದೇಶಿಸಿದರು. ಸೋಂಕಿತರು ಮೃತಪಟ್ಟರೆ ಆದಷ್ಟು ಬೇಗ ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಬೇಕು. ಶವ ಸಂಸ್ಕಾರಕ್ಕೆ ಮಾಡಬೇಕಾದ ಸಿದ್ಧತೆ ಹಾಗೂ ವಾಹನ ಸೌಲಭ್ಯ ಒದಗಿಸಲು ಕ್ರಮ ಜರುಗಿಸಬೇಕು. ಎಂಎಸಿ ಸಮಿತಿಯಿಂದ ವರದಿ ಪಡೆದು, ಜಿಲ್ಲಾ ಸಮೀಕ್ಷಣಾಧಿಕಾರಿಗಳಿಗೆ ಒದಗಿಸಲು ಕ್ರಮ ಜರುಗಿಸಬೇಕು ಎಂದರು.
ಜಿಪಂ ಸಿಇಒ ಭರತ್ ಎಸ್. ಮಾತನಾಡಿ, ಲ್ಯಾಬೊರೋಟರಿಗಳಿಗೆ ಲ್ಯಾಬ್ ಟೆಕ್ನಿಷಿಯನ್ ಹಾಗೂ ಡೇಟಾ ಎಂಟ್ರಿ ಸಿಬ್ಬಂದಿ ಒದಗಿಸಲಾ ಗುತ್ತಿದ್ದು, ಅವರನ್ನು ಬಳಸಿಕೊಂಡು ಪರೀûಾ ವರದಿ ಶೀಘ್ರವೇ ಒದಗಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಯತೀಶ್ ಎನ್, ಉಪ ಅರಣ್ಯ ಸಂರಕ್ಷಣಾಧಿ ಕಾರಿ ಸೂರ್ಯಸೇನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಸತೀಶ್ ಬಸರಿಗೀಡದ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಇದ್ದರು.