Advertisement

10 ವರ್ಷದ ರೇಪ್‌ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ನಕಾರ

09:10 AM Jul 29, 2017 | Team Udayavani |

ಹೊಸದಿಲ್ಲಿ: 10 ವರ್ಷ ವಯಸ್ಸಿನ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಸಮ್ಮತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಶುಕ್ರವಾರ ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ಬಾಲಕಿ ಈಗ 32 ವಾರಗಳ ಗರ್ಭಿಣಿ. ಈ ಸಮಯದಲ್ಲಿ ಆಕೆಗೆ ಗರ್ಭಪಾತ ಮಾಡಿದರೆ ಬಾಲಕಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಚಂಡೀಗಢದ ವೈದ್ಯಕೀಯ ಮಂಡಳಿ ವರದಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೆಹರ್‌ ನೇತೃತ್ವದ ಪೀಠ, ಬಾಲಕಿಯ ಮನವಿಯನ್ನು ತಿರಸ್ಕರಿಸಿತು.

Advertisement

ಅಷ್ಟೇ ಅಲ್ಲದೆ, ಇಂತಹ ಪ್ರಕರಣಗಳ ಸಂಖ್ಯೆ ಇತ್ತೀಚೆಗೆ ಹೆಚ್ಚುತ್ತಿರುವ ಕುರಿತು ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು. ಇಂತಹ ವಿಚಾರಗಳ ಕುರಿತು ಆದಷ್ಟು ಬೇಗ ಕಾನೂನು ತೀರ್ಮಾನ ತೆಗೆದುಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ರಾಜ್ಯದಲ್ಲೂ ಶಾಶ್ವತ ವೈದ್ಯಕೀಯ ಮಂಡಳಿ ಸ್ಥಾಪಿಸಬೇಕು. ಮಂಡಳಿ ಸ್ಥಾಪನೆಯ ಸಾಧ್ಯಾಸಾಧ್ಯತೆ ಕುರಿತು ಪರಿಶೀಲನೆ ನಡೆಸಿ, ವರದಿ ನೀಡುವಂತೆ ಸಾಲಿಸಿಟರ್‌ ಜನರಲ್‌ ರಂಜಿತ್‌ ಕುಮಾರ್‌ ಅವರಿಗೆ ಪೀಠ ಸೂಚಿಸಿತು.

Advertisement

Udayavani is now on Telegram. Click here to join our channel and stay updated with the latest news.

Next