Advertisement

10 ವರ್ಷ ಸಜೆ, ದಂಡ

10:48 PM Dec 13, 2019 | Lakshmi GovindaRaj |

ಚಿಕ್ಕಮಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ನಗರದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮೂಡಿಗೆರೆ ತಾಲೂಕಿನ ಲೋಕವಳ್ಳಿ ಗ್ರಾಮದ ಕುಮಾರ್‌, 2018ರ ಮಾ.13ರಂದು ದೇವರಮನೆ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಬಾಲಕಿಯನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದ.

Advertisement

ಅಲ್ಲದೇ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ವೆಸಗಿದ್ದ. ನಂತರ ಮನೆಗೆ ಹೋಗಬೇಕೆಂಬ ಬಾಲಕಿ ಮಾತನ್ನು ನಿರಾಕರಿಸಿ ಶೃಂಗೇರಿ, ಹೊರನಾಡು, ಮಂಗಳೂರು ಮತ್ತು ಉಡುಪಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಮೂಡಿಗೆರೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next