Advertisement

Police Dog: ಪೊಲೀಸ್ ಇಲಾಖೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶ್ವಾನಕ್ಕೆ ಬೀಳ್ಕೊಡುಗೆ

09:16 AM Oct 25, 2023 | Team Udayavani |

ಚಿಕ್ಕಮಗಳೂರು: ಪೊಲೀಸ್ ಇಲಾಖೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಹಲವು ಪ್ರಕರಣದಲ್ಲಿ ಆರೋಪಿಗಳು ಪತ್ತೆ ಹಚ್ಚುವುದರ ಜೊತೆ ಕಳ್ಳತನ, ದರೋಡೆ ಹಾಗೂ ಕೊಲೆ ಕೇಸ್‍ಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆ ಬೀಳ್ಕೊಡುಗೆ ನೀಡಿದೆ.

Advertisement

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆಯ ಶ್ವಾನ ದಳದಲ್ಲಿ ಸುದೀರ್ಘ 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹಲವಾರು ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸುವಲ್ಲಿ ಶ್ರಮಿಸಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಪದಕ, ಪ್ರಶಂಸೆ ಹಾಗೂ ಎಲ್ಲರ ಗೌರವಕ್ಕೆ ಪಾತ್ರವಾಗಿತ್ತು.‌ ಪೊಲೀಸ್ ಶ್ವಾನಕ್ಕೆ ನಗರದ ಡಿ.ಎ.ಆರ್. ಆವರಣದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆದಿದೆ.

ಶ್ವಾನದ ಹ್ಯಾಂಡ್ಲಾರ್ ಗಳಾಗಿ ಮಂಜುನಾಥ ಹಾಗೂ ಸಹಾಯಕ ನಿರ್ವಾಹಕರಾದ ಕುಮಾರ್ ಇವರುಗಳು ಕರ್ತವ್ಯ ನಿರ್ವಹಿಸುತ್ತಾರೆ. ಈ ಶ್ವಾನವು ತನ್ನ ಸೇವಾ ಅವಧಿಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜರುಗಿದ ಕಳ್ಳತನ, ದರೋಡೆ ಹಾಗೂ ಕೊಲೆ ಇತ್ಯಾದಿ 204 ಪ್ರಕರಣಗಳಲ್ಲಿ 35 ಪ್ರಕರಣದಲ್ಲಿ ಸುಳಿವು ಹಾಗೂ 9 ಜನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪೊಲೀಸ್ ಇಲಾಖೆಗೆ ಸಹಕರಿಸಿರುತ್ತದೆ. ಈ ಶ್ವಾನವು ವಾರ್ಷಿಕವಾಗಿ ನಡೆಸಲಾಗುವ ಪೊಲೀಸ್ ಡ್ಯೂಟಿ ಮೀಟ್ ನಲ್ಲಿಯೂ ಹಲವು ಪದಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿತ್ತು. ಶ್ವಾನದ ಹ್ಯಾಂಡ್ಲರ್ ಗಳಾದ ಮಂಜುನಾಥ್ ಹಾಗೂ ಕುಮಾರ್‍ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸಂಶನ ಪತ್ರ ನೀಡಿ ಗೌರವಿಸಿರುತ್ತಾರೆ. ಈ ಶ್ವಾನ 2013ರಲ್ಲಿ ಪೊಲೀಸ್ ಇಲಾಖೆ ಸೇರಿತ್ತು. ಅಲ್ಲಿಂದ ಹಲವು ಪ್ರಕರಣಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸಹಕರಿಸಿತ್ತು.

ಇದನ್ನೂ ಓದಿ: ಕೈಲಾಸ ದರ್ಶನದಿಂದ ವಾಪಾಸಾಗುವ ವೇಳೆ ನದಿಗೆ ಬಿದ್ದ ಕಾರು: ರಾಜ್ಯದ ಇಬ್ಬರು ಸೇರಿ 6 ಮಂದಿ ಸಾವು

Advertisement
Advertisement

Udayavani is now on Telegram. Click here to join our channel and stay updated with the latest news.

Next