Advertisement

Wedding Hall: ಮದುವೆ ಸಮಾರಂಭದಲ್ಲಿ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

08:32 AM Sep 27, 2023 | Team Udayavani |

ಬಾಗ್ದಾದ್: ಮದುವೆ ಸಭಾಂಗಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ 100 ಮಂದಿ ಸಜೀವ ದಹನಗೊಂಡು 150ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಇರಾಕ್ ನಲ್ಲಿ ಸಂಭವಿಸಿದೆ.

Advertisement

ಇರಾಕ್‌ನ ನಿನೆವೆ ಪ್ರಾಂತ್ಯದ ಹಮ್ದನಿಯಾ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಪ್ರಧಾನವಾಗಿ ಕ್ರಿಶ್ಚಿಯನ್ ಸಮುದಾಯವೇ ಇರುವ ಪ್ರದೇಶವಾಗಿದ್ದು, ರಾಜಧಾನಿ ಬಾಗ್ದಾದ್‌ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ ದೂರದಲ್ಲಿನ ಪ್ರದೇಶವಾಗಿದೆ.

ಮದುವೆ ಸಮಾರಂಭ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ ಪರಿಣಾಮ ಬೆಂಕಿ ಹಾಲ್ ನಲ್ಲಿರುವ ಪರದೆಗಳಿಗೆ ಆವರಿಸಿಕೊಂಡು ಇಡೀ ಸಭಾಂಗಣವನ್ನು ಆವರಿಸಿಕೊಂಡು ಸಮಾರಂಭದಲ್ಲಿ ಭಾಗಿಯಾಗಿದ್ದವರು ಗಾಬರಿಯಿಂದ ಹೊರ ಓಡಿ ಬರುವಾಗ ನೂಕುನುಗ್ಗಲು ಸಂಭವಿಸಿ ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಭವಿಸಿದ ಕೂಡಲೇ ಅಡುಗೆಗೆ ಬಳಸಿದ್ದ ಹೆಚ್ಚಿನ ಗ್ಯಾಸ್ ಸಿಲಿಂಡರ್ ಗಳನ್ನು ಹೊರ ಹಾಕಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಗ್ಯ ಸಚಿವಾಲಯದ ವಕ್ತಾರ ಸೈಫ್ ಅಲ್-ಬದರ್ ಅವರು ಸರ್ಕಾರಿ ಇರಾಕಿ ನ್ಯೂಸ್ ಏಜೆನ್ಸಿ ಮೂಲಕ ಅಪಘಾತದ ಅಂಕಿಅಂಶವನ್ನು ನೀಡಿದ್ದಾರೆ.

ಅಪಘಾತದಿಂದ ಮೃತಪಟ್ಟವರಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರವನ್ನು ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ” ಎಂದು ಅಲ್-ಬದ್ರ್ ಹೇಳಿದರು.

Advertisement

ಘಟನೆ ಕುರಿತು ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಅವರು ಅವಘಡದ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಮೃತ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Badiyadka ಪಳ್ಳತ್ತಡ್ಕ ಅಪಘಾತ ಪ್ರಕರಣ: ಶಾಲಾ ಬಸ್‌ ಚಾಲಕನ ಸೆರೆ

Advertisement

Udayavani is now on Telegram. Click here to join our channel and stay updated with the latest news.

Next