Advertisement

100 “ಕರ್ನಾಟಕ ಪಬ್ಲಿಕ್‌ ಸ್ಕೂಲ್‌’

08:15 AM Feb 17, 2018 | |

ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯಲು ಸುಸಜ್ಜಿತ ನೂರು “ಕರ್ನಾಟಕ ಪಬ್ಲಿಕ್‌ ಶಾಲೆ’ ಸ್ಥಾಪನೆಗೆ ಮುಂದಾಗಿದ್ದು, ಬಜೆಟ್‌ನಲ್ಲಿ ಘೋಷಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಲೆ ಸ್ಥಾಪಿಸಿ, ಒಂದೇ ಸೂರಿನಡಿ 1 ರಿಂದ 12ನೇ ತರಗತಿವರೆಗೆ ಗುಣಮಟ್ಟದ ಶಿಕ್ಷಣ ನೀಡುವುದು ಇದರ ಉದ್ದೇಶವಾಗಿದೆ. ಇದಕ್ಕಾಗಿ ತಲಾ 5 ಲಕ್ಷ ರೂ. ಮೀಸಲಿಟ್ಟಿದೆ. ಒಟ್ಟು 5 ಕೋಟಿ ರೂ. ಯೋಜನೆ ಇದಾಗಿದೆ ಎಂದು ಬಜೆಟ್‌ನಲ್ಲಿ ಹೇಳಲಾಗಿದೆ. ಕಳೆದ ಕೆಲವು ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದ್ದು, ಇದನ್ನು ತಪ್ಪಿಸಲು ಈ ಯೋಜನೆ ರೂಪಿಸಲಾಗಿದೆ.

Advertisement

ಅಲ್ಲದೇ, ವಿದ್ಯಾರ್ಥಿಗಳಲ್ಲಿ ವಿಶ್ವ ಭಾತೃತ್ವ, ಸೇವಾ ಮನೋಭಾವ, ಶಾಂತಿ, ಶಿಸ್ತು, ಸಂಯಮದ ಜತೆಗೆ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯಲು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಘಟಕಗಳನ್ನು ತೆರೆಯಲಾಗುತ್ತದೆ. ಇದಕ್ಕೆ ಪೂರಕವಾಗಿ ಪ್ರಸಕ್ತ ವರ್ಷದಲ್ಲಿ ಗ್ರಾಮ ಪಂಚಾಯಿತಿಯಲ್ಲಿ 176 ಸಂಯೋಜಿತ ಶಾಲೆಗಳನ್ನು ತೆರೆಯಲಾಗಿದೆ. 2018-19ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ
22,350 ಕೋಟಿ ರೂ. ಒದಗಿಸಿರುವ ಸರ್ಕಾರ, ಶಾಲೆಗಳಲ್ಲಿ ಮಕ್ಕಳಿಗೆ ಇನ್ನಷ್ಟು ಭದ್ರತೆ ಒದಗಿಸಲು ಮುಂದಾಗಿದೆ. ಖಾಸಗಿ
ಶಾಲೆಗೆ ಹೋಲಿಸಿದರೆ, ಸರ್ಕಾರಿ ಶಾಲೆಗಳಲ್ಲಿ ಕಾಂಪೌಂಡ್‌ ವ್ಯವಸ್ಥೆಯಾಗಲಿ ಅಥವಾ ಭದ್ರತಾ ಸಿಬ್ಬಂದಿ ಇರುವುದಿಲ್ಲ.
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗಬಾರದು ಎಂಬ ಉದ್ದೇಶದಿಂದ
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಯೋಜನೆಯನ್ನು ಸರ್ಕಾರ ಘೋಷಿಸಿದೆ.

ಎಸ್‌ಡಿಎಂಸಿಗಳಿಗೆ ಪ್ರಶಸ್ತಿ: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಪ್ರತಿ
ತಾಲೂಕಿನ ಒಂದು ಶಾಲಾಭಿವೃದಿಟಛಿ ಮತ್ತು ಮೇಲುಸ್ತುವಾರಿ ಸಮಿತಿಗೆ(ಎಸ್‌ಡಿಎಂಸಿ) ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ
ನೀಡಲು ಸರ್ಕಾರ ಮುಂದಾಗಿದೆ. ಇದರಿಂದ ಸರ್ಕಾರಿ ಶಾಲೆಗಳ ಎಸ್‌ಡಿಎಂಸಿ ಬಲವರ್ಧನೆಯಾಗಲಿದೆ.

ಪಾರಂಪರಿಕ ಶಾಲೆಗಳು: ರಾಜ್ಯದಲ್ಲಿ ನೂರು ವರ್ಷ ಪೂರೈಸಿರುವ 100 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳನ್ನು
“ಪಾರಂಪರಿಕ ಶಾಲೆ’ಗಳೆಂದು ಗುರುತಿಸಿ, ಅವುಗಳನ್ನು ಹಂತ ಹಂತವಾಗಿ ನವೀಕರಿಸಿ ಸಂರಕ್ಷಿಸಲಾಗುತ್ತದೆ. ಶಾಲಾ ಮಕ್ಕಳಲ್ಲಿ
ವೈಜ್ಞಾನಿಕ ಮನೋಭಾವ ಬೆಳೆಸಲು ಎಲ್ಲಾ ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ವಿಜ್ಞಾನ ಸಮಿತಿಗಳನ್ನು ಆರಂಭಿಸಲಾಗುತ್ತ
ದೆ. ಅಗಸ್ತ್ಯ ಫೌಂಡೇಷನ್‌ ಸಹಭಾಗಿತ್ವ ದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ 7.5 ಕೋಟಿ ರೂ. ವೆಚ್ಚದಲ್ಲಿ ಸಂಚಾರಿ ವಿಜ್ಞಾನ
ಪ್ರಯೋಗಾಲಯ ತೆರೆಯಲು ಉದ್ದೇಶಿಸಿದೆ.

ಡಿಜಿಟಲ್‌ ಲೈಬ್ರರಿ ಸೌಲಭ್ಯ
ರಾಜ್ಯ ಕೇಂದ್ರ ಗ್ರಂಥಾಲಯಗಳ ಶತಮಾನೋತ್ಸವ ಸ್ಮರಣಾರ್ಥವಾಗಿ ಜಿಲ್ಲಾ, ನಗರ ಮತ್ತು ತಾಲೂಕು ಸಾರ್ವಜನಿಕ ಗ್ರಂಥಾಲಯಗಳನ್ನು ಡಿಜಿಟಲ್‌ ಗ್ರಂಥಾಲಯಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುತ್ತದೆ. ಅಂತರ್ಜಾಲದ ಕೌಡ್‌ ಮೂಲಕ ರಾಜ್ಯದ ಎಲ್ಲಾ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಇದರ ಸಂಪರ್ಕ ಕಲ್ಪಿಸಲಾಗುತ್ತದೆ. 5 ಕೋಟಿ ವೆಚ್ಚದಲ್ಲಿ ರಾಜ್ಯದ ಪ್ರೌಢಶಾಲೆಯ ಸುಮಾರು 10 ಲಕ್ಷ ವಿದ್ಯಾರ್ಥಿಗಳಿಗೆ ಡಿಜಿಟಲ್‌ ಗ್ರಂಥಾಲಯದ ಸೌಲಭ್ಯ ಒದಗಿಸಲಾಗುತ್ತದೆ.
ರಾಜ್ಯ ಕೇಂದ್ರ ಗ್ರಂಥಾಲಯದ ಪುಸ್ತಕವನ್ನು ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕವೇ ಪಡೆದುಕೊಳ್ಳಬಹುದಾದ ವ್ಯವಸ್ಥೆ ಇದು.

Advertisement

ಉಚಿತ ಬಸ್‌ಪಾಸ್‌
ಶಾಲಾ-ಕಾಲೇಜುಗಳಿಗಾಗಿ ದೂರ ಪ್ರಯಾಣಿಸುವ ಅನಿವಾರ್ಯತೆ ಇರುವ ವಿದ್ಯಾರ್ಥಿಗಳಿಗೆ ಸಾರಿಗೆ ವೆಚ್ಚದ ತೊಡಕಾಗಬಾರದು ಎಂಬ ಉದ್ದೇಶದಿಂದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಿಸಲಾಗುತ್ತದೆ. ಇದರ ಪ್ರಯೋಜನವನ್ನು ರಾಜ್ಯದ
19.60 ಲಕ್ಷ ವಿದ್ಯಾರ್ಥಿಗಳು ಪಡೆಯಲಿದ್ದಾರೆ.

ಹೊಸತೇನಿದೆ?
 ಮೈಸೂರು ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಕೇಂದ್ರ 2 ಕೋಟಿ ರೂ.ಗಳ ಅನುದಾನದಲ್ಲಿ ಸ್ಥಾಪನೆ.

ಸರ್ಕಾರಿ ಕಾಲೇಜುಗಳಲ್ಲಿ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ವಿದ್ಯಾರ್ಥಿನಿಯರಿಗೆ ಶುಲ್ಕ ವಿನಾಯಿತಿ.

ಧಾರವಾಡದ ಕರ್ನಾಟಕ ವಿವಿಯಲ್ಲಿ 1 ಕೋಟಿ ರೂ.ಗಳ ವೆಚ್ಚದಲ್ಲಿ ಕೊಂಕಣಿ ಅಧ್ಯಯನ ಪೀಠ ಸ್ಥಾಪನೆ.

ಗದಗ, ಕೊಪ್ಪಳ ಮತ್ತು ಚಾಮರಾಜನಗರದ ವೈದ್ಯಕೀಯ ಕಾಲೇಜುಗಳಲ್ಲಿ  ಆಸ್ಪತ್ರೆಗಳ ಕಟ್ಟಡ ನಿರ್ಮಾಣ.

ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್‌ ಸಂಸ್ಥೆಯಲ್ಲಿ 15 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಒಂದು ಪೆಟ್‌ ಸಿ.ಟಿ. ಸ್ಕ್ಯಾನ್‌ ಸೌಲಭ್ಯ

ಹಾಸನ, ಮೈಸೂರು ಮತ್ತು ಕಾರವಾರ ವೈದ್ಯಕೀಯ ಕಾಲೇಜುಗಳಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಘಟಕ ಸ್ಥಾಪನೆ

ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನದ ಶುಶ್ರೂಷಾ ಶಾಲೆಗಳು ಹಾಗೂ ಕಾಲೇಜುಗಳಲ್ಲಿನ ಸೌಲಭ್ಯಗಳು ಮೇಲ್ದರ್ಜೆಗೆ

 ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಾವಿರ ಹಾಸಿಗೆ ಸಾಮರ್ಥ್ಯದ ಹೆಚ್ಚುವರಿ ವಾರ್ಡ್‌ ನಿರ್ಮಾಣ.

ಬೀದರ್‌ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ತಲಾ 15 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕ್ಯಾಥ್‌ ಲ್ಯಾಬ್‌ ಸೌಲಭ್ಯದೊಂದಿಗೆ ಹೃದ್ರೋಗ ಚಿಕಿತ್ಸಾ ಘಟಕಗಳ ಸ್ಥಾಪನೆ

Advertisement

Udayavani is now on Telegram. Click here to join our channel and stay updated with the latest news.

Next