ನವದೆಹಲಿ: ಏಷ್ಯಾದ ಮೂರನೇ ಅತೀ ದೊಡ್ಡ ಆರ್ಥಿಕ ಬೆಳವಣಿಗೆ ಹೊಂದುತ್ತಿರುವ ಭಾರತ 2024ರೊಳಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ನೂರು ಹೆಚ್ಚುವರಿ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಸಣ್ಣ ನಗರಗಳು ಹಾಗೂ ಗ್ರಾಮಗಳು ಸೇರಿದಂತೆ ಒಂದು ಸಾವಿರ ಹೊಸ ಮಾರ್ಗಗಳನ್ನು ಸಂಪರ್ಕಿಸುವ ಉದ್ದೇಶ ಕೂಡಾ ಪ್ರಸ್ತಾವನೆಯಲ್ಲಿ ಇದೆ ಎಂದು ವರದಿ ವಿವರಿಸಿದೆ.
2035ರೊಳಗೆ ಚೀನಾ 450 ಕಮರ್ಷಿಯಲ್ ವಿಮಾನಗಳನ್ನು ನಿರ್ಮಿಸುವ ಗುರಿ ಹಾಕಿಕೊಂಡಿದೆ. ಅಲ್ಲದೇ ಹಾಲಿ ಇರುವ ವಿಮಾನ ನಿಲ್ದಾಣಕ್ಕಿಂತ ಅದರ ಸಂಖ್ಯೆ ದ್ವಿಗುಣವಾಗಲಿದೆ ಎಂದು ತಿಳಿಸಿದೆ.
ಕಳೆದ ವಾರ ನಡೆದ ಸಭೆಯಲ್ಲಿ 2025ರ ವೇಳಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕುರಿತು ಪುನರ್ ವಿಮರ್ಶೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇಶದಲ್ಲಿ ವಿಮಾನಗಳ ಹಾರಾಟ ಮತ್ತು ಅದರ ಅಗತ್ಯದ ಬಗ್ಗೆ ಜನರ ಅಭಿಪ್ರಾಯದ ಬಗ್ಗೆಯೂ ಚರ್ಚಿಸಿರುವುದಾಗಿ ವರದಿ ತಿಳಿಸಿದೆ.
ಆರ್ಥಿಕ ಚಟುವಟಿಕೆ ಕಳೆದ ಆರು ವರ್ಷಗಳಿಗಿಂತ ಕಡಿಮೆ ಪ್ರಮಾಣದಲ್ಲಿ, ಭವಿಷ್ಯದಲ್ಲಿಯೂ ಆರ್ಥಿಕ ಬೆಳವಣಿಗೆ ಬಗ್ಗೆ ಅವಲೋಕಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಚೇತರಿಕೆಗೆ ಅಗತ್ಯವಿರುವ ಮೂಲಸೌಕರ್ಯ, ಅಭಿವೃದ್ಧಿಯನ್ನು ಕೈಗೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ 5 ಟ್ರಿಲಿಯನ್ ಅಮೆರಿಕನ್ ಡಾಲರ್ ಆರ್ಥಿಕತೆಯ ಗುರಿಯನ್ನು 2025ರೊಳಗೆ ತಲುಪಲು ಗುರಿ ಇಟ್ಟುಕೊಳ್ಳಬೇಕಾಗಿದೆ ಎಂದು ವರದಿ ಹೇಳಿದೆ.