Advertisement

ವಿಶ್ವ ಆರೋಗ್ಯ ಸಂಸ್ಥೆಯಿಂದ ನೂರು ಆಕ್ಸಿಜನ್‌ ಕಾನ್ಸನ್‌ಟ್ರೇಟರ್ಸ್‌ ಕೊಡುಗೆ

08:10 PM May 25, 2021 | Team Udayavani |

ಬೆಂಗಳೂರು : ಕರೋನಾ ವಿರುದ್ಧ ರಾಜ್ಯ ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ಸಹಾಯ ಹಸ್ತ ಚಾಚಿರುವ ವಿಶ್ವ ಆರೋಗ್ಯ ಸಂಸ್ಥೆ ನೂರು ಆಕ್ಸಿಜನ್‌ ಕಾನ್ಸನ್‌ಟ್ರೇಟರ್ಸ್‌ ಅನ್ನು ದೇಣಿಗೆಯಾಗಿ ನೀಡಿದೆ.

Advertisement

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳ ನಿಯೋಗ ನೂರು ಕಾನ್ಸನ್‌ಟ್ರೇಟರ್ಸ್‌ಗಳನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಅವರಿಗೆ ಹಸ್ತಾಂತರಿಸಿದರು.

ಕಂದಾಯ ಸಚಿವ ಆರ್‌. ಅಶೋಕ್‌, ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಸೇರಿದಂತೆ ಮುಖ್ಯಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ :ಅಪಘಾತದಂತೆ ಬಿಂಬಿಸಿ ವ್ಯಕ್ತಿಯ ಕೊಲೆ ; ಇಬ್ಬರ ಬಂಧನ : ಕೊಲೆಗೆ ಕಾರಣವಾಯ್ತು ಅಕ್ರಮ ಸಂಬoಧ

ವಿಶ್ವ ಆರೋಗ್ಯ ಸಂಸ್ಥೆ ನಿಯೋಗದಲ್ಲಿ ದಕ್ಷಿಣ ಭಾರತ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಡಾ. ಆಶೀಶ್‌ಸತ್ಪತಿಮ ರಾಜ್ಯ ಕೇಂದ್ರದ ಮುಖ್ಯಸ್ಥ ಡಾ. ಲೋಕೇಶ್‌ ಅಲಹರಿ, ಹಿರಿಯ ಅಧಿಕಾರಿಗಳಾದ ಪ್ರಾನ್ಸಿಸ್‌ ಜೆ಼ವಿಯರ್‌ ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next