Advertisement

1000 ಚೀಲ ಅನ್ನಭಾಗ್ಯ ಅಕ್ಕಿ ವಶ

06:20 AM Oct 08, 2018 | Team Udayavani |

ಹುಬ್ಬಳ್ಳಿ: ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದಾಗ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿ ಕಾರ್ಯಾಚರಣೆ ನಡೆಸಿ ವಾಹನ ಸಮೇತ ಸಾವಿರಕ್ಕೂ ಅಧಿಕ ಅಕ್ಕಿ ಚೀಲಗಳನ್ನು ತಾಲೂಕಿನ ಛಬ್ಬಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.

Advertisement

ಪಾಲಿಶ್‌ ಮಾಡಿದ್ದ ಪಡಿತರ ಆಹಾರ ಧಾನ್ಯದ ಅಕ್ಕಿಯನ್ನು ಕೋಲಾರ ಜಿಲ್ಲೆ ಬಂಗಾರಪೇಟೆಯಿಂದ ಮಹಾರಾಷ್ಟ್ರದ ವಸೈಗೆ ಲಾರಿಯಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿ ದಾಳಿ ನಡೆಸಿ ತಲಾ 25 ಕೆಜಿ ತೂಕವುಳ್ಳ ಒಂದು ಸಾವಿರ ಅಕ್ಕಿ ಪಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಅನ್ನಭಾಗ್ಯ ಅಕ್ಕಿಯನ್ನು ಬೇರೆ ಕಂಪನಿಯ ಹೆಸರಿನಲ್ಲಿ 25 ಕೆಜಿಯಂತೆ ಬ್ಯಾಗ್‌ ಸಿದಟಛಿಪಡಿಸಿ ಸಾಗಾಟ ಮಾಡಲಾಗುತ್ತಿತ್ತು. ಪೊಲೀಸರು ಅಕ್ಕಿ ಬ್ಯಾಗ್‌ಗಳೊಂದಿಗೆ ಲಾರಿ ಹಾಗೂ ಇಬ್ಬರು ಚಾಲಕರನ್ನು ವಶಪಡಿಸಿಕೊಂಡಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next