Advertisement

10,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ: ಸಚಿವ ಮಹೇಶ್‌

07:27 PM Jun 19, 2018 | Team Udayavani |

ಬೆಂಗಳೂರು : ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್‌ ಮಹೇಶ್‌ ಅವರು ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ  ಖಾಲಿ ಇರುವ 10,000 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

Advertisement

ಇಂದಿಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವ ಮಹೇಶ್‌ ಅವರು “ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ ಎಂದುತಿಳಿಸಿದರು. 

ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಪ್ರಗತಿಯಲ್ಲಿದ್ದು ಇನ್ನೊಂದು ತಿಂಗಳ ಒಳಗಾಗಿ ಅದನ್ನು ಮುಗಿಸಲು ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದುಸಚಿವರು ಹೇಳಿದರು. 

ನೇಮಕಾತಿ ಪ್ರಕ್ರಿಯೆಯು ಮೆರಿಟ್‌ ಆಧಾರದಲ್ಲಿ ನಡೆಯಲಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಪಡೆದು ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ 10,000 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಚಿವರು ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next