ನವದೆಹಲಿ: ಕೋವಿಡ್ ನ ಹೊಸ ರೂಪಾಂತರ ತಳಿ ಒಮಿಕ್ರಾನ್ ಕ್ಷಿಪ್ರವಾಗಿ ಹರಡತೊಡಗಿದ್ದು, ಭಾರತದಲ್ಲಿ ಈಗ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 101ಕ್ಕೆ ಏರಿಕೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಡಿಸೆಂಬರ್ 17) ತಿಳಿಸಿದೆ.
ಇದನ್ನೂ ಓದಿ:ಹೂಡಿಕೆದಾರರಿಗೆ ಲಕ್ಷಾಂತರ ರೂ. ನಷ್ಟ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 889 ಅಂಕ ಇಳಿಕೆ
ಈಗಾಗಲೇ ಜಗತ್ತಿನಾದ್ಯಂತ ಒಮಿಕ್ರಾನ್ ಕ್ರಿಪ್ರವಾಗಿ ಹರಡುವ ಮೂಲಕ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗತೊಡಗಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.
ದೇಶದಲ್ಲಿ 19 ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗತೊಡಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಸಮರ್ಪಕವಾಗಿ ಪಾಲಿಸಬೇಕಾದ ಅಗತ್ಯವಿದೆ. ಇದರಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಅನಾವಶ್ಯಕ ತಿರುಗಾಟಕ್ಕೆ ಕಡಿವಾಣ, ಗುಂಪು ಸೇರಿದ ಸ್ಥಳದಲ್ಲಿ ಅಂತರ ಕಾಯ್ದುಕೊಳ್ಳಬೇಕಾಗಿದೆ ಎಂದು ಕೇಂದ್ರ ಸಲಹೆ ನೀಡಿದೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇಂದು ಬೆಳಗ್ಗೆ ಮತ್ತೆ ಹತ್ತು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಇದು ಅಪಾಯದ ಕರೆಗಂಟೆಯಾಗಿದೆ ಎಂದು ಎಚ್ಚರಿಸಿದೆ. ಈ ಮೊದಲು ಕೋವಿಡ್ ಅಲೆ ಬಂದಾಗ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಪ್ರಕರಣ ವರದಿಯಾಗಿತ್ತು.
ಈಗಾಗಲೇ ಕರ್ನಾಟಕ, ಗುಜರಾತ್, ಕೇರಳ, ತಮಿಳುನಾಡು, ಪಶ್ಚಿಮಬಂಗಾಳ, ಆಂಧ್ರಪ್ರದೇಶಗಳಲ್ಲಿ ನೂತನ ಒಮಿಕ್ರಾನ್ ಸೋಂಕು ಪ್ರಕರಣಗಳು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ.