Advertisement

ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಗೆ 1010 ವಿದ್ಯಾರ್ಥಿಗಳು ಗೈರು

10:16 AM Jun 28, 2020 | Suhan S |

ಧಾರವಾಡ: ಜಿಲ್ಲೆಯ 90 ಪರೀಕ್ಷಾ ಕೇಂದ್ರ ಹಾಗೂ 17 ಹೆಚ್ಚುವರಿ ಬ್ಲಾಕ್‌ ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 107 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆ ಶನಿವಾರ ಜರುಗಿತು.

Advertisement

27,077ರಲ್ಲಿ 26,060 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, 1010 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 23935 ಇದೆ. ಮೊದಲ ಬಾರಿಗೆ ಪರೀಕ್ಷೆಗೆ ನೋಂದಣಿ ಮಾಡಿಸಿದ್ದ 728 ಖಾಸಗಿ ಅಭ್ಯರ್ಥಿಗಳ ಪೈಕಿ 611 ಮಂದಿ ಹಾಜರಾಗಿದ್ದು, 117 ಅಭ್ಯರ್ಥಿಗಳು ಗೈರಾಗಿದ್ದಾರೆ. ಸರಕಾರಿ/ ಖಾಸಗಿ ವಸತಿ ನಿಲಯದಲ್ಲಿದ್ದು, 4 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಬಸ್‌ ಹಾಗೂ ಇತರೆ ವಾಹನ ಸೇರಿ ಒಪ್ಪಂದದ ಮೇರೆಗೆ 79 ವಾಹನಗಳನ್ನು ಪಡೆಯಲಾಗಿತ್ತು. ಇದಲ್ಲದೇ 334 ವಲಸೆ ವಿದ್ಯಾರ್ಥಿಗಲ್ಲಿ 333 ಮಂದಿ ಪರೀಕ್ಷೆ ಬರೆದಿದ್ದಾರೆ. ಓರ್ವ ಗೈರಾಗಿದ್ದಾನೆ.

ಕಂಟೇನ್ಮೆಂಟ್‌ ವಲಯದ ಒಟ್ಟು 90 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೇ ಪರೀಕ್ಷೆಗೆ ಹಾಜರಾದವರಲ್ಲಿ ಅನಾರೋಗ್ಯದ ಕಾರಣದಿಂದ ವಿಶೇಷ ಕೊಠಡಿಯಲ್ಲಿ 4 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ವಿಶೇಷ ಸಾರಿಗೆ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರೀಕ್ಷಾ ಕೇಂದ್ರದ ಹೊರಗಡೆಯೇ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌ ತಪಾಸಣೆ ನಡೆಸಿ ಸ್ಯಾನಿಟೈಜರ್‌ ನೀಡಿ ಕೊಠಡಿಗಳ ಪ್ರವೇಶ ಅವಕಾಶ ನೀಡಲಾಗಿತ್ತು. ವಿದ್ಯಾರ್ಥಿಗಳು ಮಾಸ್ಕ್ ಧರಿಸಿಯೇ ಪರೀಕ್ಷೆ ಬರೆದರು. ಶನಿವಾರ ನಡೆದ ಗಣಿತ ವಿಷಯ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿ ಡಿಬಾರ್‌ ಆಗಿಲ್ಲ. ಅವ್ಯವಹಾರ, ನಕಲಿಗೆ ಆಸ್ಪದ ನೀಡದಂತೆ ಪರೀಕ್ಷೆ ನಡೆಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನಕುಮಾರ ಹಂಚಾಟೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next