Advertisement

ಮೈಸೂರು: 1,018 ಮಂದಿ ಗುಣಮುಖ

04:47 PM Sep 20, 2020 | Suhan S |

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಅಬ್ಬರ ಶನಿವಾರವೂ ಮುಂದುವರಿದಿದ್ದು ಹೊಸದಾಗಿ 626 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 1,018 ಮಂದಿ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 12 ಮಂದಿ ಮೃತಪಟ್ಟಿದ್ದಾರೆ.

Advertisement

ಶನಿವಾರ 626 ಹೊಸ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,303ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಪಾಸಿಟಿವ್‌ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಿಂದ 356, ವಿಷಮಶೀತ ಜ್ವರವಿರುವ 138, ಉಸಿರಾಟದ ಸಮಸ್ಯೆ ಹೊಂದಿರುವ 29 ಹಾಗೂ ಪ್ರವಾಸದ ಹಿನ್ನೆಲೆಯ 103ಮಂದಿಗೆಸೋಂಕು ತಗುಲಿದೆ. ಅಲ್ಲದೇ ವಿವಿಧ

ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ಮಂದಿ ಸೋಂಕಿತರು ತೀವ್ರ ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಫ‌ಲಿಸದೇ ಮೃತಪಟ್ಟಿದ್ದಾರೆ. ಇದ ರೊಂದಿಗೆಜಿಲ್ಲೆಯಲ್ಲಿಸೋಂಕಿನಿಂದ ಮೃತಪಟ್ಟವರ ಸಂಖ್ಯೆ 679ಕ್ಕೆ ಏರಿಕೆಯಾಗಿದೆ.

1,018 ಮಂದಿ ಗುಣಮುಖ: ಕೋವಿಡ್ ಸೋಂಕಿತರ ಸಂಖ್ಯೆಯೊಂದಿಗೆ ಗುಣಮುಖವಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 1,018 ಮಂದಿ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಗುಣ ಮುಖರಾದವರ ಸಂಖ್ಯೆ 23,432ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 5,192 ಸೋಂಕಿತರಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 320, ಕೋವಿಡ್‌ ಹೆಲ್ತ್‌ ಕೇರ್‌ ಸೆಂಟರ್‌ಗಳಲ್ಲಿ 806, ಖಾಸಗಿ ಆಸ್ಪತ್ರೆಗಳಲ್ಲಿ 305, ಹೋಂ ಐಸೊಲೇಷನ್‌ನಲ್ಲಿ 3,528 ಹಾಗೂ ಖಾಸಗಿ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 231 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next