ಚಿಕ್ಕಮಗಳೂರು: ತರಕಾರಿ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಚಿಕ್ಕಮಗಳೂರು ಸೆನ್ ಪೊಲೀಸರು ಸೆರೆ ಹಿಡಿದಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದು, 102 ಕೆಜಿ ಒಣ ಗಾಂಜಾ ವಶ ಪಡಿಸಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಬಳಿ ಘಟನೆ ನಡೆದಿದ್ದು, ಪೊಲೀಸರು ಮೂವರು ಆರೋಪಿಗಳು ಸೇರಿ 102 ಕೆಜಿ ಒಣ ಗಾಂಜಾ ವಶ ಪಡಿಸಲಾಗಿದೆ. ಮೊದಲ ಬಾರಿಗೆ ದೊಡ್ಡಮಟ್ಟದ ಕಾರ್ಯಾಚರಣೆ ನಡೆಸಲಾಗಿದೆ.
ಇದನ್ನೂ ಓದಿ:ಮೈಸೂರು ಪ್ರಕರಣ: ಪಕ್ಕಾ ಪ್ಲ್ಯಾನ್ ಮಾಡಿ ಅತ್ಯಾಚಾರ ನಡೆಸಿದ್ದರು ಹೆದ್ದಾರಿ ದರೋಡೆಕೋರರು
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ಖರೀದಿ ಮಾಡಿ ಈ ತಂಡ ಚಿಕ್ಕಮಗಳೂರು ಸೇರಿ ಮಂಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿತ್ತು. ಕಾಲೇಜು ಹುಡುಗರು, ಕೂಲಿ ಕಾರ್ಮಿಕರನ್ನು ಗುರಿಯಾಗಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಸೆನ್ ಇನ್ಸ್ಪೆಕ್ಟರ್ ರಕ್ಷಿತ್ ನೇತೃತ್ವದಲ್ಲಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದೆ. ಸೆನ್ ಪೊಲೀಸರ ಕಾರ್ಯಾಚರಣೆಗೆ ಎಸ್ಪಿ ಅಕ್ಷಯ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.