Advertisement

ಹುಣಸೂರು: ಶತಾಯುಷಿ ದಾಸನಪುರದ ದೇವಮ್ಮ ನಿಧನ

11:31 AM May 31, 2022 | Team Udayavani |

ಹುಣಸೂರು: ತಾಲೂಕಿನ ಹನಗೋಡು ಹೋಬಳಿ ದಾಸನಪುರ ಗ್ರಾಮದ ಶತಾಯುಷಿ ದೇವಮ್ಮ (103) ವಯೋಸಹಜವಾಗಿ ಸಾವನ್ನಪ್ಪಿದ್ದಾರೆ.

Advertisement

ಮೃತರಿಗೆ ಮೊಮ್ಮಗ ದೊಡ್ಡಹೆಜ್ಜೂರು ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಬೀರಪ್ಪ, ಮೂರು ಜನ ಗಂಡು, ಮೂರು ಜನ ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಅಂತ್ಯಕ್ರಿಯೆಯು ಮಂಗಳವಾರ ಮಧ್ಯಾಹ್ನ ದಾಸನಪುರದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಮುಳ್ಳಯ್ಯನಗಿರಿಗೆ ಜೀಪ್‌ನ ಟಾಪ್‌ನಲ್ಲಿ ಕುಳಿತು ಪ್ರಯಾಣ: ಪ್ರಕರಣ ದಾಖಲು

ಮೃತರ ಮನೆಗೆ ಶಾಸಕ ಎಚ್.ಪಿ.ಮಂಜುನಾಥ್  ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಶಾಸಕ ಜಿ.ಟಿ.ದೇವೇಗೌಡ,  ರಾಜ್ಯ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಮಹಾ ಮಂಡಳಿ ಅಧ್ಯಕ್ಷೆ ಕೆ ಲಲಿತ ಜಿ.ಟಿ.ದೇವೇಗೌಡ, ಎಂ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಟ್ಟನಾಯ್ಕ  ಎಪಿಎಂಸಿ ಅಧ್ಯಕ್ಷ ಸುಭಾಶ್, ಹನಗೋಡು ಸಹಕಾರ ಬ್ಯಾಂಕಿನ ಅಧ್ಯಕ್ಷ ಹನುಮ ಶತಯುಷಿ ದೇವಮ್ಮ ನವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next