Advertisement

ಬಾಲಕಿಗೆ ಲೈಂಗಿಕ ಕಿರುಕುಳ: 103 ವರ್ಷದ ಅಜ್ಜನಿಗೆ 10 ವರ್ಷ ಜೈಲುಶಿಕ್ಷೆ

10:36 PM Mar 18, 2022 | Team Udayavani |

ಚೆನ್ನೈ: 103 ವರ್ಷದ ವೃದ್ಧನಿಗೆ ತಮಿಳುನಾಡಿನ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆತ 2018ರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಹಲ್ಲೆ ನಡೆಸಿರುವ ಹಿನ್ನೆಲೆ ಈ ಶಿಕ್ಷೆ ನೀಡಲಾಗಿದೆ.

Advertisement

ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯನಾಗಿರುವ ಕೆ.ಪರಶುರಾಮನ್‌ ಚೆನ್ನೈನ ಹೊರವಲಯದಲ್ಲಿರುವ ಚೆನ್ನೀರಕುಪ್ಪಂನಲ್ಲಿ ಐದು ಮನೆಗಳನ್ನು ಬಾಡಿಗೆಗೆ ಕೊಟ್ಟಿದ್ದ. ಅಲ್ಲೇ ಹತ್ತಿರದಲ್ಲಿ ಮತ್ತೂಂದು ಮನೆಯಲ್ಲಿ ವಾಸಿಸುತ್ತಿದ್ದ ಆತ ತನ್ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಬಾಲಕಿಗೆ ಚಾಕಲೇಟ್‌ ತೋರಿಸಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ. ಈ ವಿಚಾರವನ್ನು ಬಾಲಕಿ ತಂದೆ ತಾಯಿ ಮುಂದೆ ಬಾಯಿ ಬಿಟ್ಟಿದ್ದಳು.

ಆ ಹಿನ್ನೆಲೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಗುರುವಾರ ಈ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಲಾಗಿದೆ. ಬಾಲಕಿಯ ಕುಟುಂಬಕ್ಕೆ 45,000 ರೂ. ಪರಿಹಾರ ನೀಡಲೂ ಆದೇಶಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next