Advertisement

ಬಳ್ಳಾರಿಯಲ್ಲಿ ಮುಂದುವರಿದ ಕೋವಿಡ್ ಕೇಕೆ: ಒಂದೇ ದಿನ 104 ಜನರಿಗೆ ಸೋಂಕು, ಓರ್ವ ಸಾವು

06:06 PM Jul 05, 2020 | keerthan |

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕೋವಿಡ್-19 ಸೋಂಕು ರಣಕೇಕೆ ಮುಂದುವರೆದೆ. ಜಿಲ್ಲೆಯಲ್ಲಿ ಭಾನುವಾರ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ.

Advertisement

ಇದರಿಂದ ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ಒಂದೇ ದಿನ 104 ಜನರಿಗೆ ಕೋವಿಡ್-19 ಪಾಸಿಟಿವ್ ಕಂಡುಬಂದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1272ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಯಲ್ಲಿ ಇಂದು ಏಳು ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ. ಒಂದು ಮತ್ತು ಮೂರು ವರ್ಷದ ಮಗುವಿಗೂ ಸೋಂಕು ಪತ್ತೆಯಾಗಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next