Advertisement
ಇದರಲ್ಲಿ ಉಡುಪಿ ಜಿಲ್ಲೆಯ 15 ಹಾಗೂ ದ.ಕ.ದ 89 ವಿದ್ಯಾರ್ಥಿನಿಯರು ಸೇರಿದ್ದಾರೆ. ಉಡುಪಿ ನಗರದ ಸರಕಾರಿ ಪ.ಪೂ. ಕಾಲೇಜಿನಿಂದ ಆರಂಭವಾದ ಹಿಜಾಬ್ ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು. ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಂಗಳೂರು ತಾಲೂಕಿನ 48, ಬೆಳ್ತಂಗಡಿಯ 6, ಬಂಟ್ವಾಳದ 17, ಪುತ್ತೂರಿನ 14, ಉಡುಪಿಯ 5, ಕಾರ್ಕಳದ 1 ಹಾಗೂ ಕುಂದಾಪುರ ತಾಲೂಕಿನ 9 ವಿದ್ಯಾರ್ಥಿನಿಯರು ಮತ್ತು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಂಗಳೂರಿನ 3 ಮತ್ತು ಬೆಳ್ತಂಗಡಿಯ ಓರ್ವ ವಿದ್ಯಾರ್ಥಿನಿ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಕಾಲೇಜು ಶಿಕ್ಷಣ ಮೊಟಕುಗೊಳಿಸಿದ್ದಾರೆ. 2022-23ನೇ ಸಾಲಿನಲ್ಲಿ ಪುನರ್ ದಾಖಲಾತಿ ಪಡೆದಿದ್ದಾರೆಯೇ ಅಥವಾ ಖಾಸಗಿ ವ್ಯವಸ್ಥೆಯ ಮೂಲಕ ನೇರವಾಗಿ ಪರೀಕ್ಷೆ ಬರೆಯಲಿದ್ದಾರೆಯೇ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.
Related Articles
Advertisement
ವಲಸೆ ಸಮಸ್ಯೆ ಉಭಯ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳಲ್ಲಿ ವಲಸೆ ಕಾರ್ಮಿಕರ ಮಕ್ಕಳೇ ಹೆಚ್ಚಿದ್ದಾರೆ. ಇಲ್ಲಿನ ಮೂಲ ನಿವಾಸಿಗಳಲ್ಲಿ ಯಾರು ಕೂಡ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದೆ ಇರಲು ಸಾಧ್ಯವಿಲ್ಲ. ಹಾಗಿದ್ದಲ್ಲಿ ಶಾಲಾ ಹಂತದಲ್ಲೇ ಸುಲಭವಾಗಿ ಪತ್ತೆ ಹಚ್ಚಲಾಗುತ್ತದೆ. ಆದರೆ, ವಲಸೆ ಕಾರ್ಮಿಕರ ಮಕ್ಕಳು ಒಂದು ಶಾಲೆಯಲ್ಲಿ ದಾಖಲಾತಿ ಪಡೆದು, ವಲಸೆಯ ಸಂದರ್ಭದಲ್ಲಿ ಯಾವುದೇ ಸೂಚನೆ ಇಲ್ಲದೇ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಇನ್ನೊಂದೆಡೆಗೆ ಹೋಗುತ್ತಾರೆ.
ಇಂತಹ ಸಂದರ್ಭದಲ್ಲಿ ಮಕ್ಕಳನ್ನು ಪತ್ತೆ ಮಾಡುವುದು ಕಷ್ಟವಾಗುತ್ತದೆ. ಕೆಲವೊಮ್ಮೆ ಕಾರ್ಮಿಕ ಇಲಾಖೆಯ ಸಹಾಯವನ್ನು ಪಡೆದು ಮಕ್ಕಳು ಶಿಕ್ಷಣ ಮುಂದುವರಿಸಲು ಬೇಕಾದ ಕ್ರಮ ತೆಗೆದುಕೊಳ್ಳುತ್ತೇವೆ. ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ (ಎಸ್‌ಎಟಿಎಸ್) ಮೂಲಕ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಯನ್ನು ಒಂದು ಶಾಲೆಯಿಂದ ಇನ್ನೊಂದು ಶಾಲೆಗೆ ವರ್ಗಾಯಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.