Advertisement
ಪಟ್ಟಣದ ಬಾಪುರಾವ್ ಪಾಟೀಲ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪಂಡಿತ ದೀನದಯಾಳ ಉಪಾಧ್ಯಾಯರ 105ನೇ ಜನ್ಮದಿನದ ಅಂಗವಾಗಿ ದೀಪದಿಂದ ಕಮಲದ ವರೆಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೀನ ದಯಾಳ ಅವರಲ್ಲಿನ ಪಕ್ಷ ನಿಷ್ಠೆ, ರಾಷ್ಟ್ರ ಭಕ್ತಿ ನಮಗೆಲ್ಲಾ ಸದಾ ಪ್ರೇರಣೆ. ಅವರ ಆದರ್ಶ, ತತ್ವ, ಸಿದ್ಧಾಂತ ಅಳವಡಿಸಿಕೊಳ್ಳುವ ಮೂಲಕ ಪಕ್ಷದ ಸಂಘಟನೆಯಲ್ಲಿ ತೊಡಗಿ, ಮತ್ತೆ ದೇಶದಲ್ಲಿ, ರಾಜ್ಯದಲ್ಲಿ ಅಷ್ಟೇ ಅಲ್ಲ ಚಿತ್ತಾಪುರ ಕ್ಷೇತ್ರದಲ್ಲೂ ಬಿಜೆಪಿ ಬಾವುಟ ಹಾರಿಸಬೇಕು ಎಂದು ಕರೆ ನೀಡಿದರು. ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ ಮಾತನಾಡಿ, ಭಾರತೀಯ ಜನತಾ ಪಕ್ಷ ಇಷ್ಟು ಎತ್ತರಕ್ಕೆ ಬೆಳೆಯಲು ದೀನದಯಾಳ ಆದರ್ಶಗಳೇ ಪ್ರಮುಖ ಕಾರಣ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ದೀನದಯಾಳ ಜೀವನ ಚರಿತ್ರೆ ತಿಳಿದುಕೊಳ್ಳಬೇಕು ಎಂದರು. ಎಸ್‌ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ನಾಮದೇವ ಕರಹರಿ ಪಂಡಿತ ದೀನದಯಾಳ ಉಪಾಧ್ಯಾಯರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು.
Related Articles
Advertisement
ಪಟ್ಟಣದ ಸಜ್ಜನ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮಂಡಲದ ವತಿಯಿಂದ ಶನಿವಾರ ಆಯೋಜಿಸಿದ್ದ ಪಂಡಿತ ದೀನ ದಯಾಳ ಉಪಾಧ್ಯಾಯರ 105ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೀನ ದಯಾಳ ಉಪಾಧ್ಯಾಯ ಅವರು ಕಂಡಿದ್ದ ಮುನ್ನೋಟದ ಹಾದಿಯಲ್ಲಿಯೇ ಹೆಜ್ಜೆಯಿಡುತ್ತಾ ಮುಂದೆ ಸಾಗುತ್ತಿದೆ. ಮೋದಿ ಅವರು ದೇಶದ ಪ್ರಧಾನಿಯಾದ ನಂತರ ಭಾರತ ದೇಶದ ದಿಕ್ಕೇ ಬದಲಾಗಿದೆ. ಮುಂದುವರಿದ ರಾಷ್ಟ್ರಗಳಲ್ಲಿ ಭಾರತ ಕೂಡ ಒಂದಾಗಿದೆ. ಪ್ರಧಾನಿ ಮೋದಿ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ ಎಂದರು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಗೂ ಮುಂಚೆ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನಲ್ಲಿ ಬೂತ್‌ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪಕ್ಷದ ಪದಾಧಿ ಕಾರಿಗಳು, ಕಾರ್ಯಕರ್ತರು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಪಕ್ಷವನ್ನು ಸಂಘಟಿಸಲು ಒತ್ತು ನೀಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾಜಿ ಸೈನಿಕರಾದ ರಾಚಯ್ಯ ಹಿರೇಮಠ ಅರಳಗುಂಡಗಿ, ಆದಪ್ಪ ಸಾಹು ಸಿಕೇದ್ ಕೋಳಕೂರ, ಬಿಜೆಪಿ ಹಿರಿಯ ಮುಖಂಡ ಹಳ್ಳೆಪ್ಪಾಚಾರ್ಯ ಜೋಶಿ ಕಾಸರಭೋಸಗಾ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ಹಿರಿಯ ಮುಖಂಡರಾದ ರಮೇಶಬಾಬು ವಕೀಲ, ಧರ್ಮಣ್ಣ ದೊಡ್ಡಮನಿ, ಜಿಪಂ ಮಾಜಿ ಸದಸ್ಯೆ ಶೋಭಾ ಬಾಣಿ, ಜೇವರ್ಗಿ ಬಿಜೆಪಿ ಮಂಡಲ ಅಧ್ಯಕ್ಷ ಭೀಮರಾವ್ ಗುಜಗೊಂಡ, ಬಸವರಾಜ ಪಾಟೀಲ ನರಿಬೋಳ, ಸಿದ್ಧಣ್ಣ ಹೂಗಾರ, ಧರ್ಮಣ್ಣ ಇಟಗಾ, ಬಸವರಾಜ ಪಾಟೀಲ ಕುಕನೂರ, ಪುಂಡಲೀಕ ಗಾಯಕವಾಡ, ಮಲ್ಲಿನಾಥಗೌಡ ಯಲಗೋಡ, ಬಸವರಾಜ ಮಾಲಿಪಾಟೀಲ ಅರಳಗುಂಡಗಿ, ರೇವಣಸಿದ್ಧಪ್ಪ ಸಂಕಾಲಿ, ಸಾಯಬಣ್ಣ ದೊಡ್ಡಮನಿ, ಕೇದಾರಲಿಂಗಯ್ಯ ಹಿರೇಮಠ, ಶರಣು ಪೂಜಾರಿ, ವಿಶಾಲ ಹಿರೇಮಠ ಸೇರಿದಂತೆ ಜೇವರ್ಗಿ, ಯಡ್ರಾಮಿ ತಾಲೂಕು ಬಿಜೆಪಿ ಮಂಡಲದ ಪದಾ ಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.