Advertisement

108 ಆ್ಯಂಬುಲೆನ್ಸ್‌ ವ್ಯವಸ್ಥೆಯ ಗುಣಮಟ್ಟ ಹೆಚ್ಚಿಸಲು ಚಿಂತನೆ : ಸಚಿವ. ಸುಧಾಕರ್

08:22 PM Nov 06, 2020 | sudhir |

ಬೆಂಗಳೂರು: ರಾಜ್ಯಾದ್ಯಂತ ಗುಣಮಟ್ಟದ ಆ್ಯಂಬುಲೆನ್ಸ್‌ ಸೇವೆ ಒದಗಿಸುವ ನಿಟ್ಟಿನಲ್ಲಿ ಹಾಲಿ ಜಾರಿಯಲ್ಲಿರುವ 108 ಆ್ಯಂಬುಲೆನ್ಸ್‌ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡುವಂತೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ಸ‌ೂಚನೆ ನೀಡಿದ್ದಾರೆ.

Advertisement

ಈ ಕುರಿತು ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ತುರ್ತು ಆರೋಗ್ಯ ಸೇವೆ ನೀಡುವ ಆ್ಯಂಬುಲೆನ್ಸ್‌ ಸೇವೆ ಮಹತ್ವದ್ದಾಗಿದೆ. ಸದ್ಯ ನಮ್ಮಲ್ಲಿರುವ ವ್ಯವಸ್ಥೆಯಲ್ಲಿ ಸಾಕಷ್ಟು ಲೋಪಗಳಿದ್ದು, ಅವುಗಳನ್ನು ಸರಿಪಡಿಸಬೇಕು ಎಂದರು.

ಕಾಲ್‌ ಸೆಂಟರ್‌ನಲ್ಲಿ ಕರೆ ಸ್ವೀಕರಿಸಿ ಸಮೀಪದಲ್ಲಿ ಇರುವ ಆ್ಯಂಬುಲೆನ್ಸ್‌ಗೆ ಕಳುಹಿಸಬೇಕು. ಉಬರ್‌ ಮತ್ತು ಓಲಾ ಮಾದರಿಯ ಆ್ಯಪ್‌ ವ್ಯವಸ್ಥೆ ಇರಬೇಕು ಎಂದು ನಿರ್ದೇಶನ ನೀಡಿದರು.

108 ಆ್ಯಂಬುಲೆನ್ಸ್‌ ಸೇವೆಗೆ ಸರಕಾರ ದೊಡ್ಡ ಮೊತ್ತ ನೀಡುತ್ತದೆ. ಆದರೆ ಅದಕ್ಕೆ ತಕ್ಕಂತೆ ಗುಣಮಟ್ಟದ ಸೇವೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮಾದರಿ ಆಗುವಂತಹ ವ್ಯವಸ್ಥೆ ಜಾರಿಗೊಳಿಸಬೇಕಿದೆ. ಅದಕ್ಕಾಗಿ ಹೊಸದಾಗಿ ಟೆಂಡರ್‌ ನೀಡುವಾಗ ಲೋಪಗಳಿಗೆ ಅವಕಾಶವಿಲ್ಲದಂತೆ ಜಾಗತಿಕ ಮಟ್ಟದ ಸೇವೆ ನೀಡುವ ಸಂಸ್ಥೆ/ ಕಂಪೆನಿಗಳಿಗೆ ಗುತ್ತಿಗೆ ನೀಡಬೇಕು ಎಂದರು.

ಇದನ್ನೂ ಓದಿ:ಹೋಟೆಲ್‍ನಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳ: ಜ್ಯೋತಿಷಿ ಹತ್ಯೆ! ಸ್ಥಳದಲ್ಲಿ ಬಿಗುವಿನ ವಾತಾವರಣ

Advertisement

ಒಂದು ಲಕ್ಷ ಜನಸಂಖ್ಯೆ ಮಾನದಂಡವಾಗಿ ಇಟ್ಟುಕೊಳ್ಳುವ ಬದಲಿಗೆ ಭೌಗೋಳಿಕ ಸವಾಲು ಮತ್ತು ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕರಾರು ವಿಧಿಸಬೇಕು. ಸಂದೇಶ ಬಂದ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿ ರೋಗಿಯನ್ನು ಕರೆದೊಯ್ಯುವಂತಿರಬೇಕು ಎಂದು ತಿಳಿಸಿದರು.

ಜಿಪಿಎಸ್‌, ಬಯೋಮೆಟ್ರಿಕ್‌, ಕಾಲ್‌ ಸೆಂಟರ್‌ ವ್ಯವಸ್ಥೆ ಸದೃಢವಾಗಿರಬೇಕು. ವಾಹನಗಳ ಹೊಣೆ ಮತ್ತು ಐಟಿ ಪ್ರತ್ಯೇಕವಾಗಿ ಗುತ್ತಿಗೆ ನೀಡಬೇಕೆ, ಬೇಡವೇ? ಯಾವುದು ಹೆಚ್ಚು ಉಪಯೋಗ ಎಂಬ ಅಧ್ಯಯನ ಮಾಡಬೇಕು ಎಂದರು.

ಒಂದು ವೇಳೆ ನಮ್ಮ ಆಶಯಕ್ಕೆ ತಕ್ಕ ಸೇವೆ ಸಿಗದಿದ್ದರೆ ಗುತ್ತಿಗೆ ರದ್ದು ಮಾಡಲೂ ಅವಕಾಶ ಇರಬೇಕು. ಕಾನೂನಿನ ತಕರಾರು ಎದುರಾಗದಂತೆ ಗುತ್ತಿಗೆ ಒಪ್ಪಂದ ರೂಪಿಸಬೇಕು ಎಂದು ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next