Advertisement
108 ಆ್ಯಂಬುಲೆನ್ಸ್ ಸೇವೆಯ ಉಸ್ತುವಾರಿ ವಹಿಸಿಕೊಂಡ ಜಿವಿಕೆ ಸಂಸ್ಥೆಯು 2023ರ ಡಿಸೆಂಬರ್‌ನಿಂದ ಎಪ್ರಿಲ್ ವರೆಗಿನ ವೇತನವನ್ನು ಬಾಕಿ ಇರಿಸಿಕೊಂಡಿದೆ. ಈ ನಡುವೆ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದಾಗ ಡಿಸೆಂಬರ್ ಹಾಗೂ ಜನವರಿ ತಿಂಗಳಿನ ಒಟ್ಟು ಮೊತ್ತದ ಅರ್ಧದಷ್ಟು ವೇತನ ಪಾವತಿಸಿದೆ. ಇನ್ನೂ 3 ತಿಂಗಳ ಪೂರ್ಣ ವೇತನ ಬಾಕಿಯಿದೆ ಎಂದು 108 ಆ್ಯಂಬುಲೆನ್ಸ್ ನೌಕರ ಸಂಘದ ಉಪಾಧ್ಯಕ್ಷ ಪರಮಶಿವಯ್ಯ ತಿಳಿಸಿದರು.
ಸೋಮವಾರ ರಾತ್ರಿ 8 ಗಂಟೆಯೊಳೆಗೆ ಬಾಕಿಯಿರುವ ವೇತನ ಬಿಡುಗಡೆ ಮಾಡಬೇಕು. ಒಂದು ವೇಳೆ ವೇತನ ಸಿಗದಿದ್ದರೆ ರಾಜ್ಯಾದ್ಯಂತ ಸೇವೆಯನ್ನು ಸ್ಥಗಿತಗೊಳಿಸುತ್ತೇವೆ. ಇದರಿಂದ ಆಗುವ ಅನಾಹುತಗಳಿಗೆ ಜಿವಿಕೆ ಸಂಸ್ಥೆ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು. ಸರಕಾರಿ ವ್ಯವಸ್ಥೆಯಡಿ ರಾಜ್ಯಾದ್ಯಂತ 715ಕ್ಕೂ ಅಧಿಕ ಆ್ಯಂಬುಲೆನ್ಸ್‌ಗಳು ಕಾರ್ಯಾಚರಿಸುತ್ತಿದೆ. ಇದರಲ್ಲಿ ಡ್ರೈವರ್ ಹಾಗೂ ಸಹಾಯಕ ಸಿಬಂದಿ ಸಹಿತ 3000 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Related Articles
Advertisement