Advertisement

ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಬಿಎಸ್ ವೈ ಶಂಕು ಸ್ಥಾಪನೆ

04:55 PM Jun 27, 2020 | keerthan |

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರಿಗೆ ಸರ್ಕಾರ ಗೌರವ ಸಲ್ಲಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

Advertisement

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ‌ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ಸೆಂಟ್ರಲ್ ಪಾರ್ಕ್ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕೆಂಪೇಗೌಡರು ಚತುರ ಆಡಳಿತಗಾರರಾಗಿದ್ದ ಕೆಂಪೇಗೌಡರಿಗೆ ಬೆಂಗಳೂರನ್ನು ಯೋಜನಾ ಬದ್ಧವಾಗಿ ನಿರ್ಮಿಸಿದ ಕೀರ್ತಿ ಸಲ್ಲುತ್ತದೆ. ಶಾಶ್ವತ ನದಿ ಮೂಲಗಳಿಲ್ಲದ ನಗರದಲ್ಲಿ ನೀರಿನ ಸೆಲೆ ಹೆಚ್ಚಿಸಲು ಹಲವು ಕೆರೆಗಳನ್ನು ನಿರ್ಮಿಸಿದ ಖ್ಯಾತಿಯೂ ಅವರಿಗಿದೆ. ಕೆಂಪೇಗೌಡರ ಕೊಡುಗೆ ಸ್ಮರಿಸುತ್ತಲೇ ಹಾಲಿ ನಗರದಲ್ಲಿ ಮೂಲಸೌಕರ್ಯವನ್ನು ಬಲಪಡಿಸಬೇಕಿದೆ. ಜತೆಗೆ ಆರೋಗ್ಯ, ಘನತ್ಯಾಜ್ಯ ಇತರ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕಿದೆ. ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಶ್ರಮಿಸಿದ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣಗೆ ಧನ್ಯವಾದ ಸಲ್ಲಿಸುತ್ತೇನೆ ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮುಂತಾದವರು ಭಾಗವಹಸಿದರು.

Advertisement

Udayavani is now on Telegram. Click here to join our channel and stay updated with the latest news.

Next