Advertisement

11 ಮಂದಿ ದರೋಡೆಕೋರರ ಸೆರೆ

11:56 AM Jul 06, 2018 | Team Udayavani |

ಬೆಂಗಳೂರು: ಒಂಟಿಯಾಗಿ ನಡೆದುಕೊಂಡು ಹೋಗುವವರನ್ನು ಗುರಿಯಾಗಿಸಿಕೊಂಡು ಮೊಬೈಲ್‌ ಹಾಗೂ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರು ಮಂದಿ ಕಾನೂನು ಸಂಘರ್ಷಕ್ಕೊಳಗಾದವರು ಸೇರಿ 11 ಮಂದಿಯನ್ನು ಜಯನಗರ ಉಪವಿಭಾಗದ ಪೊಲೀಸರು ಬಂಧಿಸಿದ್ದಾರೆ.

Advertisement

ಚಂದ್ರಪ್ಪನಗರದ ಅಬೂಬಕ್ಕರ್‌ (19), ಮೊಹಮ್ಮದ್‌ ಹರ್ಷಿಲ್‌ (20), ಶಿವ (19), ಬನ್ನೇರುಘಟ್ಟದ ಸೈಯದ್‌ ಮುಜಾಯಿದ್‌, ಗುರಪ್ಪನಪಾಳ್ಯ ನಿವಾಸಿ ವಾಸಿಂ ಅಕ್ರಮ್‌ ಹಾಗೂ ಆರು ಮಂದಿ ಕಾನೂನು ಸಂಘರ್ಷಕ್ಕೊಳಗಾದವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 6.30 ಲಕ್ಷ ರೂ. ಮೌಲ್ಯದ 15 ಮೊಬೈಲ್‌ಗ‌ಳು ಹಾಗೂ 9 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿದ್ದಾಪುರ, ಜಯನಗರ ಮತ್ತು ಜೆ.ಪಿ.ನಗರ ಠಾಣೆ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇವರಿಂದ ನಗರದ ಇತರೆ ಠಾಣೆಗಳಲ್ಲಿ ದಾಖಲಾಗಿದ್ದ ಮೊಬೈಲ್‌, ಬೈಕ್‌ ಕಳವು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ.

ನಿರ್ಜನ ಪ್ರದೇಶಗಳಲ್ಲಿ ಒಂಟಿಯಾಗಿ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಹೋಗುವವರನ್ನು ಟಾರ್ಗೆಟ್‌ ಮಾಡುತ್ತಿದ್ದ ಆರೋಪಿಗಳು, ದರೋಡೆ ಮಾಡುತ್ತಿದ್ದರು. ಹಾಗೇ ಒಂಟಿಯಾಗಿ ಕಾರು ಮತ್ತು ಬೈಕ್‌ ಚಾಲನೆ ಮಾಡಿಕೊಂಡು ಹೋಗುವವರನ್ನು ವಿಳಾಸ ಕೇಳುವ ನೆಪದಲ್ಲಿ ಅಡ್ಡಗಟ್ಟಿ ಮೊಬೈಲ್‌, ನಗದು ಹಾಗೂ ಇತರೆ ವಸ್ತುಗಳನ್ನು ದರೋಡೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next