Advertisement

Rajasthan ಭೀಕರ ಅಪಘಾತ: ಕೆಟ್ಟು ನಿಂತ ಬಸ್ಸಿಗೆ ಟ್ರಕ್ ಡಿಕ್ಕಿ ಹೊಡೆದು 11 ಮಂದಿ ಮೃತ್ಯು

08:57 AM Sep 13, 2023 | Team Udayavani |

ಭರತ್‌ಪುರ: ರಾಜಸ್ಥಾನದ ಭರತ್‌ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 11 ಜನರು ಮೃತಪಟ್ಟು 12 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದಾಗ ಮುಂಜಾನೆ 4.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಹಂಟ್ರಾ ಸೇತುವೆಯ ಮೇಲೆ ಡೀಸೆಲ್ ಖಾಲಿಯಾದ ಪರಿಣಾಮ ಹೆದ್ದಾರಿ ಬದಿ ಬಸ್ ನಿಂತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಡೀಸೆಲ್ ಖಾಲಿಯಾದ ಪರಿಣಾಮ ಬಸ್ ಚಾಲಕ ಮತ್ತು ಕೆಲವು ಪ್ರಯಾಣಿಕರು ಬಸ್‌ನ ಹಿಂಬದಿಯಲ್ಲಿ ನಿಂತಿದ್ದಾಗ ವೇಗವಾಗಿ ಬಂದ ಟ್ರಕ್ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಅಲ್ಲಿ ಬದುಕುಳಿದ ಇತರ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಐವರು ಪುರುಷರು ಮತ್ತು ಆರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಗಂಭೀರ ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನೂ ಓದಿ: Dress Code: ನೂತನ ಸಂಸತ್ ಕಟ್ಟಡದಲ್ಲಿ ವಿಶೇಷ ಅಧಿವೇಶನ… ಸಿಬ್ಬಂದಿಗೆ ಹೊಸ ಡ್ರೆಸ್ ಕೋಡ್

Advertisement
Advertisement

Udayavani is now on Telegram. Click here to join our channel and stay updated with the latest news.

Next