Advertisement
ಇನ್ನೂ 316 ಜನರ ಗಂಟಲು ದ್ರವ ಮಾದರಿಯ ವರದಿ ಬರುವುದು ಬಾಕಿ ಇದೆ. ಸೋಂಕಿನಿಂದ ಒಟ್ಟು 219 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್-19 ಆಸ್ಪತ್ರೆಯಲ್ಲಿ 85 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 15,129 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 2787 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 4385 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದಾರೆ. 7872 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 13833 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 12879 ಜನರ ವರದಿ ನಕಾರಾತ್ಮಕವಾಗಿದೆ. ಒಟ್ಟು 316 ಜನರ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 305 ಆಗಿದ್ದು, ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಎಂಟು ಜನರಿದ್ದಾರೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ವೈದ್ಯಕೀಯ ವರದಿ ತಿಳಿಸಿದೆ. Advertisement
11 ಸೋಂಕಿತರು ಗುಣಮುಖ: ಮತ್ತೋರ್ವ ವ್ಯಕ್ತಿಗೆ ಕೋವಿಡ್
11:26 AM Jun 13, 2020 | Suhan S |
Advertisement
Udayavani is now on Telegram. Click here to join our channel and stay updated with the latest news.