Advertisement
ಅವಿರೋಧ ಆಯ್ಕೆ: ಮಂಡ್ಯ ತಾಲೂಕಿನ ದೊಡ್ಡಗರುಡನಹಳ್ಳಿ -2, ಬೇವಿನಹಳ್ಳಿ-1, ಮದ್ದೂರು ತಾಲೂಕಿನ ಕೆಸ್ತೂರು-1, ನಿಲುವಾಗಿಲು-1, ಕೆ.ಹೊನ್ನಲಗೆರೆ-1, ಮಳವಳ್ಳಿ ತಾಲೂಕಿನ ಹಲಸಹಳ್ಳಿ-1, ಹಲಗೂರು-1, ಪಾಂಡವಪುರ ತಾಲೂಕಿನ ಚಿಕ್ಕಾಡೆ-1, ಕೆ.ಆರ್.ಪೇಟೆ ತಾಲೂಕಿನ ಬಲ್ಲೇನಹಳ್ಳಿ, ನಾಗಮಂಗಲ ತಾಲೂಕಿನ ಕದಬಹಳ್ಳಿಯ ಒಂದು ಸ್ಥಾನಗಳಿಗೆ ಸದಸ್ಯರನ್ನು ಅವಿರೋಧ ಆಯ್ಕೆ ಮಾಡಲಾಗಿದೆ.
Related Articles
Advertisement
ಮತದಾನ ಶಾಂತಿಯುತವಾಗಿ ನಡೆಯುವುದಕ್ಕೆ ಅಗತ್ಯ ಕ್ರಮ ವಹಿಸಲಾಗಿದೆ. ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕಾರ್ಯವು ಮೇ 31ರಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ.
ಬ್ಯಾನರ್ ಅಳವಡಿಸುವಂತಿಲ್ಲ: ಅವಿರೋಧವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ತಕ್ಷಣದಿಂದಲೇ ಸ್ಥಗಿತಗೊಂಡಿದೆ. ಉಪ ಚುನಾವಣೆ ನಡೆಯಲಿರುವ ಗ್ರಾಪಂಗಳ ವ್ಯಾಪ್ತಿಯಲ್ಲಿ ಮೇ 31ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಗ್ರಾಪಂ ಚುನಾವಣೆಗಳು ಪಕ್ಷರಹಿತ ಚುನಾವಣೆಗಳಾಗಿರುವುದರಿಂದ ರಾಜಕೀಯ ಪಕ್ಷದ ಮುಖಂಡರು ಹಾಗೂ ಸ್ಪರ್ಧಾಳುಗಳು ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು. ಚುನಾವಣಾ ಪ್ರಚಾರದ ಅವಧಿಯಲ್ಲಿ ರಾಜಕೀಯ ಪಕ್ಷಗಳು ಸಭೆ-ಸಮಾರಂಭಗಳನ್ನು ಏರ್ಪಡಿಸಿ ವೇದಿಕೆ ಮೇಲೆ ಪಕ್ಷದ ಬಾವುಟ-ಬ್ಯಾನರ್‌ಗಳನ್ನು ಅಳವಡಿಸುವುದು ಮಾಡುವಂತಿಲ್ಲ.
ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ ಅಥವಾ ಬೆಂಬಲಿತ ಅಭ್ಯರ್ಥಿ ಎಂದು ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ. ರಾಜಕೀಯ ಮುಖಂಡರ ಭಾವಚಿತ್ರ, ಪಕ್ಷದ ಚಿಹ್ನೆಯಿರುವ ಕರಪತ್ರಗಳು, ಕಟೌಟ್‌ಗಳು, ಬ್ಯಾನರ್‌ಗಳು, ಬಂಟಿಂಗ್‌ಗಳನ್ನು ಬಳಸಿ ಪ್ರಚಾರ ಮಾಡುವಂತಿಲ್ಲ.