Advertisement

ಹೊಸಪೇಟೆ: ಲಾರಿಗೆ ಬಸ್ ಢಿಕ್ಕಿಯಾಗಿ 11 ಜನರಿಗೆ ಗಾಯ

08:57 AM Jun 15, 2022 | Team Udayavani |

ಹೊಸಪೇಟೆ:  ಕೆಎಸ್‌ಆರ್‌ಟಿಸಿ ಬಸ್, ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ 11 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಬುಧವಾರ ನಸುಕಿನ ವೇಳೆ ನಡೆದಿದೆ.

Advertisement

ಬೆಂಗಳೂರಿನಿಂದ ಬರುತ್ತಿದ್ದ ಬಸ್‌, ಮುಂದೆ ಚಲಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ 11 ಜನರು ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಧರ್ಮಸ್ಥಳ: ರಸ್ತೆಗೆ ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಸಾವು

ಪೊಲೀಸರು ಮತ್ತು ಹೈವೆ ಪೆಟ್ರೋಲಿಂಗ್ ಸಿಬ್ಬಂದಿಯ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾನಾಹೊಸಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next