Advertisement
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಎಸ್‌ಸಿ- ಎಸ್‌ಟಿ, ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಡಾ| ಎಚ್.ಸಿ. ಮಹದೇವಪ್ಪ ಅವರು ಎಸ್‌ಸಿ-ಎಸ್‌ಟಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಸರಕಾರ ಬಳಸಿಕೊಳ್ಳುತ್ತಿದೆ ಎಂಬ ಬಿಜೆಪಿ ಆರೋಪವನ್ನು ಮೊದಲಿಗೆ ತಳ್ಳಿಹಾಕಿದರು. ಆದರೆ ಪರಿಷ್ಕೃತ ಬಜೆಟ್‌ನಲ್ಲಿ ನಮೂದಾದ ವಿಚಾರಗಳ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಗಳಿಗೆ ಈ ಅನುದಾನ ಬಳಕೆಯಾಗಲಿದೆ ಎಂದು ಸಮರ್ಥಿಸಿಕೊಂಡರು.
ಒಟ್ಟು 34,293.69 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಸಭೆ ಅನುಮೋದನೆ ನೀಡಿದೆ. ಈ ಪೈಕಿ ಪರಿಶಿಷ್ಟ ಜಾತಿಗಳಿಗೆ 24,333 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡಗಳಿಗೆ 9,961 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ.
Related Articles
Advertisement
ಸಮಗ್ರ ಅಧ್ಯಯನ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಯುಜಿಸಿ ಮಾಜಿ ಅಧ್ಯಕ್ಷ ಪ್ರೊ| ಸುಖದೇವ್ ಥೋರಟ್ ಅವರನ್ನು ತೊಡಗಿಸಿಕೊಳ್ಳಬೇಕು ಎಂಬ ಅಪೇಕ್ಷೆಯಿದ್ದು, ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಥೋರಟ್ ಸಮ್ಮತಿಸಿದ ಅನಂತರ ಸ್ಥೂಲ ಮೌಲ್ಯಮಾಪನ ಮುಂದುವರಿಯಲಿದೆ. ಈ ವರದಿ ಸಲ್ಲಿಕೆಗೆ ನಿರ್ದಿಷ್ಟ ಕಾಲಮಿತಿ ವಿಧಿಸಲು ಆಲೋಚಿಸಿಲ್ಲ ಎಂದರು.
ಹೊಸರೂಪನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಬಲವರ್ಧಿಸಿ ಹೊಸ ರೂಪ ನೀಡಲು ತೀರ್ಮಾನಿಸಿದ್ದು, ಕಾರ್ಯಕ್ಷಮತೆ ಹೆಚ್ಚಳ, ತ್ವರಿತ ಸ್ಪಂದನೆ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಆದ್ಯತೆ ನೀಡಲಾಗುವುದು. ಪ್ರತೀ ಮೂರು ತಿಂಗಳಿಗೊಮ್ಮೆ ರಾಜ್ಯ ಅಭಿವೃದ್ಧಿ ಪರಿಷತ್ ಸಭೆ ಹಾಗೂ 6 ತಿಂಗಳಿಗೊಮ್ಮೆ ವಿಚಕ್ಷಣ ದಳದ ಸಭೆ ನಡೆಸಲಾಗುತ್ತದೆ. ಶೋಷಿತ ಸಮುದಾಯಗಳು ಶೈಕ್ಷಣಿಕ, ಸಾಮಾಜಿಕ, ಔದ್ಯೋಗಿಕವಾಗಿ ಸಮಾನತೆ ಸಾಧಿಸಬೇಕು ಎನ್ನುವುದು ಸರಕಾರದ ಸಂಕಲ್ಪವಾಗಿದೆ ಎಂದು ತಿಳಿಸಿದರು. ಎಸ್‌ಸಿ, ಎಸ್‌ಟಿ ಉಪಯೋಜನೆಯಡಿ ಮೀಸಲಿಟ್ಟ ಅನುದಾನ ಅನ್ಯ ಉದ್ದೇಶಕ್ಕೆ ಬಳಸುವಂತಿಲ್ಲ. ಆದರೂ ಬೇರೆ ಉದ್ದೇಶಗಳಿಗೆ ಅನುದಾನ ವಿನಿಯೋಗಿಸಿದ 36 ದೂರುಗಳು ಸಲ್ಲಿಕೆಯಾಗಿದ್ದು, ವಿಚಾರಣೆ ನಡೆಯುತ್ತಿದೆ. ಲೋಪ ದೃಢಪಟ್ಟರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಡೀಮ್ಡ್ ಎಕ್ಸ್‌ಪೆಂಡಿಚರ್ ಹೆಸರಿನಲ್ಲಿ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಲು ಅವಕಾಶ ನೀಡುತ್ತಿದ್ದ ಕಾಯ್ದೆಯ 7ಡಿ ಉಪಬಂಧವನ್ನು ಸರಕಾರ ರದ್ದುಗೊಳಿಸಿದೆ ಎಂದರು. ಈ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಯ್ದೆ ಹೇಳುತ್ತದೆ. ಕಾಯ್ದೆ ಗಂಭೀರವಾಗಿದೆ. ಅದರಂತೆ ನಿರ್ಲಕ್ಷ್ಯ ಮಾಡಿದವರ ವಿರುದ್ಧ ಕಾಯ್ದೆಯ ಅನ್ವಯ ಕ್ರಮ ಕೈಗೊಳ್ಳುತ್ತೇನೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ ಸಿಎಂ ಸಂವಿಧಾನದ ಗಂಭೀರ ವಿದ್ಯಾರ್ಥಿ
ಸಭೆಯ ಆರಂಭದಲ್ಲಿ ಮಾತನಾಡಿದ ಸಚಿವ ಎಚ್.ಸಿ. ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು “ಸಂವಿಧಾನದ ಗಂಭೀರ ವಿದ್ಯಾರ್ಥಿ’ ಎಂದು ಉಲ್ಲೇಖೀಸಿದರು. ಈ ಕಾಯ್ದೆ ಜಾರಿಗೆ ತರುವ ಹಿಂದೆ ಮುಖ್ಯಮಂತ್ರಿಗಳ ಸಾಮಾಜಿಕ ಬದ್ಧತೆಯನ್ನು ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿಗಳ ಮತ್ತು ಕಾಯ್ದೆಯ ಆಶಯ ಮತ್ತು ಉದ್ದೇಶಕ್ಕೆ ಧಕ್ಕೆ ಆಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಯಾವ ಇಲಾಖೆಗೆ ಎಷ್ಟೆಷ್ಟು ಅನುಮೋದನೆ?
ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ 34,293.69 ಕೋಟಿ ರೂ. ಮೊತ್ತದ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಪರಿಷತ್ತಿನ ಉಪಾಧ್ಯಕ್ಷ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಚಿವರಾದ ನಾಗೇಂದ್ರ, ಎಚ್.ಕೆ. ಪಾಟೀಲ್ , ಪ್ರಿಯಾಂಕ್ ಖರ್ಗೆ, ಎಂ.ಸಿ.ಸುಧಾಕರ್, ರಾಜ್ಯ ಸಭಾ ಸದಸ್ಯ ಡಾ.ಎಲ್ ಹನುಮಂತಯ್ಯ, ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ಪ್ರಸಾದ್ ಅಬ್ಬಯ್ಯ, ಇ. ತುಕಾರಾಂ, ಪ್ರಕಾಶ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ- 5790.67 ಕೋಟಿ , ಇಂಧನ ಇಲಾಖೆ- 5400.98 ಕೋಟಿ ರೂ. ಕಂದಾಯ ಇಲಾಖೆಗೆ – 4041.78 ಕೋಟಿ ರೂ. ಪರಿಶಿಷ್ಟ ಜಾತಿ ಕಲ್ಯಾಣಕ್ಕೆ – 3787.29 ಕೋಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ- 2779.97 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಲಾಖೆಗೆ- 2349.85 ಕೋಟಿ ರೂ. ವಸತಿ ಇಲಾಖೆಗೆ- 1431.5 ಕೋಟಿ ರೂ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ- 1387.35 ಕೋಟಿ ರೂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ – 1296.96 ಕೋಟಿ ರೂ. ಆರೋಗ್ಯ ಇಲಾಖೆಗೆ – 1122.25 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಮುಂದುವರೆದ ಯೋಜನೆಗಳಿಗೆ 1897 ಕೋಟಿ ರೂ. ಈ ವರೆಗೆ ವೆಚ್ಚ ಮಾಡಲಾಗಿದೆ. ಮುಂದಿನ ಎಂಟು ತಿಂಗಳಲ್ಲಿ ಅನುಮೋದನೆಗೊಂಡ ಕ್ರಿಯಾ ಯೋಜನೆಯನ್ವಯ ಯೋಜನೆ ಅನುಷ್ಠಾನ ಮಾಡಿ, 34293.69 ಕೋಟಿ ರೂ. ಅನುದಾನ ಸಂಪೂರ್ಣ ವೆಚ್ಚ ಮಾಡಬೇಕು ಎಂದು ಸೂಚಿಸಲಾಗಿದೆ. ಇಲಾಖೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಅನುದಾನ ಉಳಿದರೆ, ಮರು ಹಂಚಿಕೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದರು. ವಸತಿ ಶಾಲೆಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ. 60 ಹಾಗೂ ಹೊರಗಿನ ವಿದ್ಯಾರ್ಥಿಗಳಿಗೆ ಶೇ. 40 ರಷ್ಟು ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಮಾಡಲು ಸೂಚಿಸಲಾಯಿತು. ಪರಿಶಿಷ್ಟ ಜಾತಿ, ಪಂಗಡದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ ಸೌಲಭ್ಯ ಕಲ್ಪಿಸಬೇಕು. ಯಾವುದೇ ಕಾರಣಕ್ಕೆ ದಲಿತ ವಿದ್ಯಾರ್ಥಿಗಳು ಡ್ರಾಪ್ ಔಟ್ ಆಗಬಾರದು. ಬೇಡಿಕೆ ಇರುವೆಡೆ ರುದ್ರಭೂಮಿ ಒದಗಿಸಬೇಕು. ಹಾಸ್ಟೆಲ್ ಮತ್ತು ವಸತಿ ಶಾಲೆಗಳಿಗೆ ಆದ್ಯತೆ ಮೇರೆಗೆ ಜಾಗ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಯಿತು.