Advertisement

ಹೆಣ್ಣು ಮಗುವಿಗೆ ಜನ್ಮ ನೀಡಿದ 11 ವರ್ಷದ ಅತ್ಯಾಚಾರ ಸಂತ್ರಸ್ತೆ

03:11 PM Dec 08, 2021 | Team Udayavani |

ಉದಯಪುರ: ಇಲ್ಲಿನ ಕಾಮಾಂಧನೊಬ್ಬನಿಂದ ಅತ್ಯಾಚಾರಕ್ಕೊಳಗಾದ 11 ವರ್ಷದ ಬಾಲಕಿ ರಾಜಸ್ಥಾನದ ಸರ್ಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

Advertisement

ಕಳೆದ ವಾರ ಗುರುವಾರ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಎರಡು ದಿನಗಳ ನಂತರ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ರಿಷಭದೇವ್ ವೃತ್ತದ ಅಧಿಕಾರಿ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.

ಆಸ್ಪತ್ರೆಯಿಂದ ಮಾಹಿತಿ ಪಡೆದು, ಆಕೆಯ ತಂದೆ ಭಾನುವಾರ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ ನಂತರ ನಾವು ಕುಟುಂಬವನ್ನು ಸಂಪರ್ಕಿಸಿದ್ದೇವೆ” ಎಂದು ಅವರು ಹೇಳಿದರು.

ಖೇರ್ವಾರಾ ಪೊಲೀಸ್ ಠಾಣೆಯಲ್ಲಿ 19 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

”ಆರೋಪಿ ಮತ್ತು ಸಂತ್ರಸ್ತೆಯ ಚಿಕ್ಕಪ್ಪ ಗುಜರಾತ್‌ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಕಳೆದ ವರ್ಷ ಮೊದಲ ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಗುಜರಾತ್‌ನಿಂದ ಹಿಂದಿರುಗಿದಾಗ ಅವರು ಹುಡುಗಿಯ ಮನೆಯಲ್ಲಿ ತಂಗಿದ್ದರು. ಅಂದಿನಿಂದ ಅವರು ಅತ್ಯಾಚಾರ ಸಂತ್ರಸ್ತೆಯೊಂದಿಗೆ ಸಂಪರ್ಕದಲ್ಲಿದ್ದರು,”ಎಂದು ಅವರು ಹೇಳಿದರು.

Advertisement

ಆರೋಪಿಯು ತಲೆಮರೆಸಿಕೊಂಡಿದ್ದು, ಅವನನ್ನು ಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next